ವೀರಾಜಪೇಟೆ, ಫೆ. ೧೦: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೂ. ೧ ಕೋಟಿ ವೆಚ್ಚದ ನೂತನ ಕಟ್ಟಡ ನಿರ್ಮಾಣಕ್ಕೆ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸಿದರು.

ತದನಂತರ ಮಾತನಾಡಿದ ಅವರು, ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗದ ಮೂಲಕ ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತಿದ್ದು, ಕಟ್ಟಡದಲ್ಲಿ ಒಂದು ಲ್ಯಾಬ್, ಒಂದು ಕಚೇರಿ, ನಾಲ್ಕು ತರಗತಿಗಳು ಶೌಚಾಲಯಗಳು ಇರಲಿವೆ. ಹಳೆಯ ಕಟ್ಟಡಗಳಲ್ಲಿ ಪಾಠ ಪ್ರವಚನ ಮಾಡಲು ಕಷ್ಟಕರವಾಗಿತ್ತು. ನೂತನ ಕಟ್ಟಡ ನಿರ್ಮಾಣದಿಂದ ಅನುಕೂಲವಾಗುತ್ತದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಜೊತೆಗೆ ಉತ್ತಮ ಶಿಕ್ಷಣ ಪಡೆಯಬೇಕು ಎಂದರು.

ಈ ಸಂದರ್ಭ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಜ್ಯೋತಿ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ಪ.ಪಂ. ಸದಸ್ಯೆ ಆಶಾ ಸುಬ್ಬಯ್ಯ ಸೇರಿದಂತೆ ಕಾಲೇಜು ಉಪನ್ಯಾಸಕರು, ಸಿಬ್ಬಂದಿಗಳು ಹಾಜರಿದ್ದರು.