ಮಡಿಕೇರಿ, ಫೆ. ೯: ಕರ್ನಾಟಕ ಸಾಹಿತ್ಯ ಅಕಾಡೆಮಿಯು ೨೦೨೨ ರ ಮಾರ್ಚ್ ತಿಂಗಳಲ್ಲಿ ಐದು ದಿನಗಳ ಕಾಲ ‘ರಾಷ್ಟಿçÃಯ ಕನ್ನಡ ಸಂಶೋಧನಾ ಕಮ್ಮಟವನ್ನು ನಡೆಸಲು ಉದ್ದೇಶಿಸಿದ್ದು, ಈ ಕಮ್ಮಟದಲ್ಲಿ ಪರ್ಯಾಯ ಗೋಷ್ಠಿಗಳು ನಡೆಯಲಿವೆ. ಕಮ್ಮಟದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ಕಡ್ಡಾಯವಾಗಿ ಪ್ರಬಂಧ ಮಂಡಿಸಬೇಕು. ಪ್ರಬಂಧದ ಗುಣಮಟ್ಟದ ಆಧಾರದ ಮೇಲೆ ಶಿಬಿರಾರ್ಥಿಗಳ ಆಯ್ಕೆ ಮಾಡಲಾಗುವುದು. ಕಮ್ಮಟದ ಪರ್ಯಾಯ ಗೋಷ್ಠಿಯಲ್ಲಿ ನೀಡಿರುವ ಪಠ್ಯಕ್ರಮದ ಆಧಾರದ ಮೇಲೆ ತಾವು ಮಂಡಿಸುವ ಪ್ರಬಂಧಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಪ್ರಬಂಧವನ್ನು ತಾ. ೨೨ ರೊಳಗೆ ಅಕಾಡೆಮಿಗೆ ರಿಜಿಸ್ಟರ್ ಅಂಚೆ ಅಥವಾ ಕೊರಿಯರ್ ಮೂಲಕ ನಿಬಂಧನೆಗೊಳಪಟ್ಟು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ನಿಬಂಧನೆಗಳು ಹಾಗೂ ಪಠ್ಯಕ್ರಮ ಸೇರಿದಂತೆ ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ hಣಣಠಿ://sಚಿhiಣhಥಿಚಿಚಿಛಿಚಿಜemಥಿ. ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಎನ್. ಕರಿಯಪ್ಪ ತಿಳಿಸಿದ್ದಾರೆ.