ಗೋಣಿಕೊಪ್ಪಲು, ಫೆ. ೧೦: ವಾರದ ಹಿಂದೆ ದಕ್ಷಿಣ ಕೊಡಗಿನ ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಟ್ಟಂದಿಯಲ್ಲಿ ಹುಲಿ ದಾಳಿ ನಡೆಸಿ, ಗೂಳಿಯನ್ನು ಕೊಂದು ಹಸುವಿನ ಮೇಲೆ ದಾಳಿ ನಡೆಸಿದ ತರುವಾಯ ಇದೀಗ ಇದೇ ಗ್ರಾಮದಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆ ಆಗಿದೆ.

ಕುಟ್ಟಂದಿ ಗ್ರಾಮದ ಹರಿ ಎಂಬವರ ಭತ್ತದ ಗದ್ದೆಯಲ್ಲಿ ಹುಲಿಯ ಹೆಜ್ಜೆ ಗುರುತುಗಳು ಕಂಡು ಬಂದಿವೆ. ಇದರಿಂದಾಗಿ ಇಲ್ಲಿನ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

ಈ ಭಾಗದ ಸುತ್ತಮುತ್ತಲಿನ ಪ್ರದೇಶವು ದಟ್ಟವಾದ ಅರಣ್ಯದಿಂದ ಕೂಡಿದ ಪ್ರದೇಶವಾಗಿರುವುದರಿಂದ ಹುಲಿಯು ಇಲ್ಲಿ ಅಡಗಿರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.