ಮಡಿಕೇರಿ, ಫೆ. ೧೦: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ವತಿಯಿಂದ ಟಿ. ಶೆಟ್ಟಿಗೇರಿಯಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ಕೋಟ್ಪಾ ತನಿಖಾ ದಾಳಿಯನ್ನು ಹಮ್ಮಿಕೊಳ್ಳಲಾಯಿತು.

ಕೋಟ್ಪಾ ಕಾಯ್ದೆಯನ್ನು ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಿ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು. ದಾಳಿಯಲ್ಲಿ ಒಟ್ಟು ರೂ. ೨೩೦೦ ದಂಡ ಸಂಗ್ರಹಣೆ ಮಾಡಲಾಯಿತು. ಈ ದಾಳಿಯಲ್ಲಿ ಕೋಟ್ಪಾ ತನಿಖಾ ತಂಡದ ಸದಸ್ಯರುಗಳಾದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರೇಮಕುಮಾರ್, ಶಶಿಕಾಂತ್ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣದ ಜಿಲ್ಲಾ ಸಮಾಜ ಕಾರ್ಯಕರ್ತ ಮಂಜುನಾಥ ಆರ್ ಮತ್ತು ಪೊಲೀಸ್ ಇಲಾಖೆಯವರು ಭಾಗವಹಿಸಿದ್ದರು.