ಬೆಂಗಳೂರು, ಫೆ. 11: ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ತಾ. 12, 13ರ ಭಾನುವಾರ ರಜಾ ದಿನ ಸಹಿತವಾಗಿ, ತಾ. 14, 15 ಮತ್ತು 16 ರವರೆಗೆ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನನ ರಹಿತ ಪದವಿ ಕಾಲೇಜಗಳು, ಡಿಪ್ಲೋಮಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ.
ಈ ದಿನಾಂಕಗಳಂದು ಪರೀಕ್ಷೆಗಳು ನಡೆಯುತ್ತಿದ್ದಲ್ಲಿ ಯಥಾವತ್ತಾಗಿ ನಡೆಯಲಿವೆ ಹಾಗೂ ಆನ್ಲೈನ್ ತರಗತಿಗಳ ಮೂಲಕ ವ್ಯಾಸಂಗ ಕ್ರಮವನ್ನು ನಡೆಸುವಂತೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.