ಕುಶಾಲನಗರ, ಫೆ. 11: ಕನ್ನಡ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲೂಕು ಘಟಕದ ಪದಗ್ರಹಣ ಸಮಾರಂಭ ತಾ. 13 ರಂದು ಅಪರಾಹ್ನ 3 ಗಂಟೆಗೆ ಕುಶಾಲನಗರದ ಕನ್ನಿಕಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿಯ ಶಕ್ತಿ ದಿನಪತ್ರಿಕೆ ಸಂಪಾದಕ ಜಿ. ಚಿದ್ವಿಲಾಸ್ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಪರಿಷತ್ತಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಅತಿಥಿಗಳಾಗಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಮುನೀರ್ ಅಹಮದ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ವಿ.ಪಿ. ಶಶಿಧರ್, ಬಿ.ಬಿ. ಭಾರತೀಶ್, ಕುಶಾಲನಗರದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್. ಶರವಣಕುಮಾರ್, ಹೊಟೇಲ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ಪೆÇನ್ನಂಪೇಟೆ ತಾಲೂಕು ಕಸಾಪ ಅಧ್ಯಕ್ಷ ಕೋಳೇರ ದಯಾ ಚೆಂಗಪ್ಪ, ವೀರಾಜಪೇಟೆ ತಾಲೂಕು ಅಧ್ಯಕ್ಷ ಡಿ. ರಾಜೇಶ್, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ನವೀನ್ ಅಂಬೇಕಲ್, ಸೋಮವಾರ ಪೇಟೆ ತಾಲೂಕು ಕಸಾಪ ಅಧ್ಯಕ್ಷ ಡಿ. ವಿಜೇತ್ ಭಾಗವಹಿಸಲಿದ್ದಾರೆ ಎಂದು ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್. ಮೂರ್ತಿ ತಿಳಿಸಿದ್ದಾರೆ.