ಕೂಡಿಗೆ, ಫೆ. ೧೦: ಕುಶಾಲನಗರ ಸುಂದರನಗರದ ವಿದ್ಯಾರ್ಥಿನಿಲಯದಲ್ಲಿ ಇತ್ತೀಚೆಗೆ ನಡೆದ ಗಲಾಟೆ ವಿಚಾರಕ್ಕೆ ಸಂಬAಧಿಸಿದAತೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಅಂಥೋಣಿ ಪ್ರಜ್ವಲ್ (೧೮) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ.

ಗಲಾಟೆ ವಿಚಾರದಿಂದ ಮನನೊಂದ ಪ್ರಜ್ವಲ್ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಂತರ ಈ ವಿಚಾರ ಸ್ನೇಹಿತರಿಗೆ ತಿಳಿದು ಆತನಿಗಾಗಿ ಹುಡುಕಾಟ ನಡೆಸಿದಾಗ ಕುಶಾಲನಗರದಲ್ಲಿ ಪತ್ತೆಯಾಗಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.