ಸುಂಟಿಕೊಪ್ಪ, ಫೆ. 11: 7ನೇ ಹೊಸಕೋಟೆ ತೊಂಡೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನೆಗೆ ಎರಡು ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿಗಳಾದ ರೋಹಿತ್, ಸುಖ್ರಜ್ ಹಾಗೂ 7ನೇ ಹೊಸಕೋಟೆ ಸೇವಾ ಪ್ರತಿನಿಧಿಯಾದ ನಿರ್ಮಲ ಪ್ರಕಾಶ್ ಚೆಕ್ ಹಸ್ತಾಂತರಿಸಿದರು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ದಿಲೀಪ್ ಕುಮಾರ್. ಖಜಾಂಜಿ ದಿನೇಶ್, ಖಜಾಂಜಿ ಕೆ.ಜೆ ಶಿವ, ಸಂತೋಷ್ ಪೂಂಜ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ , ಹೇಮಾ ಸ್ಥಳೀಯರಾದ ಮಂಜು ಹಾಗೂ ಗ್ರಾಮಸ್ಥರು ಹಾಜರಿದ್ದರು.