ಸೋಮವಾರಪೇಟೆ, ಫೆ. 11: ಮಂಡಲ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಇಲ್ಲಿನ ಪಕ್ಷದ ಕಚೇರಿಯಲ್ಲಿ ಪಂಡಿತ್ ದೀನದಯಾಳ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.

ಮಂಡಲ ಅಧ್ಯಕ್ಷ ಮನುಕುಮಾರ್ ರೈ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ದೀನದಯಾಳ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಪಕ್ಷದ ಕಾರ್ಯಕರ್ತರಾದ ಪ್ರದೀಪ್, ಅಶೋಕ್, ಪ್ರಜಾ ಪೂಣಚ್ಚ, ಸತೀಶ್, ಮಹೇಶ್, ಹರೀಶ್, ನಂಜುಂಡ, ಪ್ರಿಜೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.