ಮಡಿಕೇರಿ, ಫೆ. ೧೦: ಮಕ್ಕಂದೂರು ಗ್ರಾಮ ಪಂಚಾಯಿತಿ ಯಲ್ಲಿ ೨೦೨೧ -೨೨ನೇ ಸಾಲಿನ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕನ್ನಿಕಂಡ ಶ್ಯಾಮ್ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿನೇಶ್ ಉದ್ಯೋಗ ಖಾತ್ರಿ ಯೋಜನೆ ಹಾಗೂ ೧೪ನೇ ಹಣಕಾಸು ಖರ್ಚು - ವೆಚ್ಚಗಳ ವರದಿಯನ್ನು ಮಂಡಿಸಿದರು. ಸಾಮಾಜಿಕ ಲೆಕ್ಕ ಪರಿಶೋಧನೆಯ ಸಂಯೋಜಕರಾದ ರೋಹಿತ್ ರವರು ಮಾತನಾಡಿ, ಮಕ್ಕಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿಗಳನ್ನು ಪರಿಶೀಲಿಸಿದ್ದು, ಯಾವುದೇ ಲೋಪ ದೋಷಗಳು ಕಂಡುಬರುವುದಿಲ್ಲ. ಸಾಕಷ್ಟು ಸಂಖ್ಯೆಯಲ್ಲಿ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಉತ್ತಮ ಕಾಮಗಾರಿಗಳು ನಡೆದಿದೆ ಎಂದು ಹೇಳಿದರು.
ನೋಡಲ್ ಅಧಿಕಾರಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಬಾಲಕೃಷ್ಣರವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಸಭೆ, ವಾರ್ಡ್ ಸಭೆಯಲ್ಲಿ ಪಾಲ್ಗೊಳ್ಳಬೇಕು ಹಾಗೂ ಭವಿಷ್ಯದ ಭದ್ರತೆಗಾಗಿ ಆರ್ಥಿಕ ಚಟುವಟಿಕೆಯುಳ್ಳ ವೈಯಕ್ತಿಕ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಮಕ್ಕಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯು ಅಭಿವೃದ್ಧಿ ಕಡೆಗೆ ಸಾಗುತ್ತಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಕನ್ನಿಕಂಡ ಶ್ಯಾಮ್ ಸುಬ್ಬಯ್ಯ ಮಾತನಾಡಿದರು.
ಈ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕ ನವಾನಿ ಡಿ.ಕೆ., ತಾಲೂಕು ಐ.ಇ.ಸಿ. ಸಂಯೋಜಕಿ ಅಕ್ಷಿತ ಕೆ.ಡಿ ಯೋಜನೆಯ ಮಾಹಿತಿಯನ್ನು ಒದಗಿಸಿಕೊಟ್ಟರು. ಸಭೆಯಲ್ಲಿ ಉಪಾಧ್ಯಕ್ಷೆ ಕವಿತ ಪಿ.ಎಸ್., ಸದಸ್ಯರು, ಗ್ರಾಮಸ್ಥರು, ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಸಭೆಯಲ್ಲಿ ಉಪಾಧ್ಯಕ್ಷೆ ಕವಿತ ಪಿ.ಎಸ್., ಸದಸ್ಯರು, ಗ್ರಾಮಸ್ಥರು, ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.