ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ
ಬೆಂಗಳೂರು, ಫೆ. 11; ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ಡಿಸಿ, ಎಸ್.ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಯಿತು.
ಸೋಮವಾರದಿಂದ ಪ್ರೌಢಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮಕೈಗೊಳ್ಳಬೇಕು. ಸೂಕ್ಷ್ಮ ಜಿಲ್ಲೆಗಳಲ್ಲಿ ಪ್ರಮುಖ ಶಾಲೆಗಳನ್ನು ಎಸ್.ಪಿ ಹಾಗೂ ಡಿ.ಸಿ ಗಳು ಭೇಟಿ ಮಾಡಬೇಕು. ಅಹಿತಕರ ಘಟನೆಗಳು ಆಗದಂತೆ ಎಚ್ಚರ ವಹಿಸಿ ಎಂದು ಸೂಚಿಸಿದರು. (ಮೊದಲ ಪುಟದಿಂದ) ಶಾಲಾ ಪ್ರಾಂಶುಪಾಲರು, ಶಿಕ್ಷಕರು, ಪೆÇೀಷಕರು ಹಾಗೂ ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅವರು ನಿರಂತರ ಸಂಪರ್ಕ ಹೊಂದಿರಬೇಕು. ಜಿಲ್ಲೆಯ ಹಿರಿಯರು, ಪ್ರಮುಖರು, ಜನಪ್ರತಿನಿಧಿಗಳೊಂದಿಗೂ ಸಹ ನಿರಂತರ ಸಂಪರ್ಕದಲ್ಲಿರಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಶಾಂತಿ ಸಭೆಯನ್ನು ನಡೆಸಿ ಉಚ್ಚ ನ್ಯಾಯಾಲಯದ ಆದೇಶವನ್ನು ಅಕ್ಷರಶಃ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಯಾವುದೇ ಒತ್ತಡಕ್ಕೆ ಮಣಿಯಬಾರದು. ಸಣ್ಣ ಘಟನೆಯನ್ನೂ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಆದ್ಯತೆ ಮೇರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದು. ಹೊರಗಿನ ಪ್ರಚೋದನಗೆ ಒಳಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರದೇಶಗಳನ್ನು ಹಂಚಿಕೆ ಮಾಡಿಕೊಂಡು ನಿಗಾ ವಹಿಸಬೇಕು. ಎಲ್ಲಾ ರಾಜಕೀಯ ಪಕ್ಷಗಳನ್ನು, ಧಾರ್ಮಿಕ ಮುಖಂಡರನ್ನು ಸ್ಥಳೀಯ ಅಧಿಕಾರಿಗಳು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿ ಹಾಗೂ ಪ್ರಚೋದನಕಾರಿ ಸಂದೇಶಗಳು ಹರಡದಂತೆ ನಿಗಾ ವಹಿಸುವಂತೆ ಹೇಳಿದರು.
ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪ್ರಾಂಶುಪಾಲರು ಪೆÇೀಷಕರು ಹಾಗೂ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಬೇಕು. ಸಮಾಜಘಾತುಕ ಶಕ್ತಿಗಳನ್ನು ಗುರುತಿಸಿ ಅವರ ಮೇಲೆ ನಿಗಾ ವಹಿಸಲಾಗಿದೆ ಎಂಬ ಸಂದೇಶ ರವಾನಿಸಬೇಕು. ಮೇಲಿನಿಂದ ಯಾವುದೇ ಆದೇಶಗಳಿಗೆ ಕಾಯದೇ, ಸಂದರ್ಭಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಬೇಕು. ಮಾಧ್ಯಮಗಳಿಗೆ ಜಿಲ್ಲೆಗಳಲ್ಲಿನ ವಸ್ತುಸ್ಥಿತಿಯನ್ನು ಸರಿಯಾಗಿ ವಿವರಿಸಬೇಕು. ತಪ್ಪು ಮಾಹಿತಿ ಹೋಗದಂತೆ ಎಚ್ಚರ ವಹಿಸಬೇಕು ಎಂದರು.
ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ಪೆÇಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.