ಮಡಿಕೇರಿ, ಫೆ.11: ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾ. 18 ರಂದು ಮಧ್ಯಾಹ್ನ 3.30 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಮತ್ತು ಸಂಜೆ 4.30 ಗಂಟೆಗೆ ಕೊಡಗು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಾಧಿಕಾರದ ಸದಸ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ಕಾರ್ಯದರ್ಶಿ ಅವರು ತಿಳಿಸಿದ್ದಾರೆ.