ಬೆಂಗಳೂರು, ಫೆ. ೧೦: ಹಿಜಾಬ್ ವಿವಾದ ಕುರಿತ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ, ಸದ್ಯಕ್ಕೆ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಸರಕಾರಕ್ಕೆ ಮಧ್ಯಂತರ ಮೌಖಿಕ ನಿರ್ದೇಶನ ನೀಡಿದ್ದು, ಆದೇಶ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ ೧೪ಕ್ಕೆ ಮುಂದೂಡಿದೆ. ನಾವು ಸೋಮವಾರದಿಂದ ಪ್ರತಿದಿನ ವಿಚಾರಣೆಯನ್ನು ಮುಂದುವರಿಸುತ್ತೇವೆ ಮತ್ತು ಶೀಘ್ರದಲ್ಲೆ ಈ ಕುರಿತು ನಿರ್ಧರಿಸುತ್ತೇವೆ. ಮೇಲಾಗಿ ಶಾಂತಿ ಮತ್ತು ನೆಮ್ಮದಿಯನ್ನು ಪುನಃ ಸ್ಥಾಪಿಸಲು ನಾವು ಬಯಸುತ್ತೇವೆ. ವಿಷಯಗಳು ನಿರ್ಧಾರವಾಗುವವರೆಗೆ ಧಾರ್ಮಿಕ ಗುರುತು ಸೂಚಿಸುವಂತಹ ಸೋಮವಾರದಿಂದ ಪ್ರೌಢಶಾಲೆ ಆರಂಭ
ಮುಖ್ಯಮAತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ
ನ್ಯಾಯಾಲಯದ ಸೂಚನೆ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಧ್ಯಮಗಳಿಗೆ ನೀಡಿದ ಮಾಹಿತಿ ಹೀಗಿದೆ. ‘‘ಪ್ರಥಮ ಹಂತವಾಗಿ ಸೋಮವಾರದಿಂದ (ತಾ. ೧೪) ೮ ರಿಂದ ೧೦ ನೇ ತರಗತಿವರೆಗೆ ಪ್ರೌಢಶಾಲೆಗಳನ್ನು ಆರಂಭಿಸಲಾಗುವುದು. ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆಯ ಸಚಿವರುಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಭೇದ ಭಾವ ಮರೆತು ಸೌಹಾರ್ದಯುತವಾಗಿ ವರ್ತಿಸುವಂತಾಗಲಿ. ಸೋಮವಾರದ ಬಳಿಕ ಎರಡನೇ ಹಂತದಲ್ಲಿ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳನ್ನು ಯಾವಾಗ ಆರಂಭಿಸಬೇಕು ಎಂದು ನಿರ್ಧರಿಸಲಾಗುತ್ತದೆ’’ ಎಂದು ಮುಖ್ಯಮಂತ್ರಿ ನುಡಿದರು. ‘‘ಶುಕ್ರವಾರದಂದು ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಾಗುವುದು’’ ಎಂದು ತಿಳಿಸಿದರು.ವಸ್ತçಗಳನ್ನು ವಿದ್ಯಾರ್ಥಿಗಳು ಧರಿಸಿ ತರಗತಿಗಳಿಗೆ ಹಾಜರಾಗಲು ಒತ್ತಾಯಿಸಬಾರದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠ ತಿಳಿಸಿದೆ.
ಇಂದು ಹಿಜಾಬ್ ಅರ್ಜಿ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠ ಈ ಮೌಖಿಕ ಆದೇಶ ನೀಡಿದೆ. ಅದರಂತೆ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಹಿಜಾಬ್, ಕೇಸರಿ ಶಾಲು ಬಳಸದೆ ಸಮವಸ್ತçವನ್ನು ಮಾತ್ರ ಧರಿಸಿ ಬರಬೇಕು. ಇನ್ನು ಅರ್ಜಿಯ ವಿಚಾರಣೆ ಮುಗಿಯುವವರೆಗೂ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗಬಾರದು ಎಂದು ಪೀಠ ಆದೇಶಿಸಿದೆ.
ಮುಂದಿನ ವಿಚಾರಣೆಯನ್ನು ಮುಂದಿನ ಸೋಮವಾರ ಮಧ್ಯಾಹ್ನ ೨.೩೦ಕ್ಕೆ ಮುಂದೂಡಿರುವ
ರಿತುರಾಜ್ ಅವಸ್ಥಿ ಅವರು ತುರ್ತಾಗಿ ಅರ್ಜಿಯ ವಿಚಾರಣೆ ಮುಗಿಸಲು ಆಗುವುದಿಲ್ಲ. ವಾದ-ಪ್ರತಿವಾದಗಳನ್ನು ಕೂಲಂಕುಶವಾಗಿ ಪರಿಶೀಲಿಸಬೇಕಿದೆ. ಹೀಗಾಗಿ ಶಾಲೆ ಮತ್ತು ಕಾಲೇಜು ಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದ್ದು ವಿದ್ಯಾರ್ಥಿಗಳು ಸಮವಸ್ತç ಮಾತ್ರ ಧರಿಸಿ ಬರಬೇಕು ಎಂದು ತಿಳಿಸಿದೆ.
ಹಿಜಾಬ್ ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ದೇವದತ್ ಕಾಮತ್ ಅವರು ವಾದ ಮಂಡಿಸಿದರು. ಇನ್ನು ಹಿರಿಯ ವಕೀಲರಾದ ಸಂಜಯ್ ಹೆಗಡೆ ಸಹ ವಾದ ಮಂಡಿಸಿದ್ದರು. ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ ನಾವದಗಿ ವಾದ ಮಂಡಿಸಿದರು.