ಮಡಿಕೇರಿ, ಫೆ. 11: ಕೊಡಗು ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ, ಡಾ. ಬಿ.ಆರ್. ಅಂಬೇಡ್ಕರ್, ಏಕಲವ್ಯ, ಅಟಲ್ ಬಿಹಾರಿ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ (ಆಂಗ್ಲ ಮಾಧ್ಯಮ) 2022-23ನೇ ಸಾಲಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿರುವ 5ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ತಾ. 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್ 20 ರಂದು ಪರೀಕ್ಷೆ ನಡೆಸಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ. ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ, ಏಕಲವ್ಯ ವಸತಿ ಶಾಲೆಗಳಲ್ಲಿ ಆನ್‍ಲೈನ್ hಣಣಠಿ ://ಞeಚಿ.ಞಚಿಡಿ.ಟಿiಛಿ.iಟಿ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ. ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ, ಏಕಲವ್ಯ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಪಠ್ಯಪುಸ್ತಕ, ಸಮವಸ್ತ್ರ, ಶೂ, ಶುಚಿ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಸೋಮವಾರಪೇಟೆ 9611307646, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಸವನಹಳ್ಳಿ 9945707234, ಏಕಲವ್ಯ ವಸತಿ ಶಾಲೆ, ಬಾಳುಗೋಡು 9902499269, ಅಟಲ್ ಬಿಹಾರಿ ವಸತಿ ಶಾಲೆ, ಭಾಗಮಂಡಲ 9148594914, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ನಾಪೋಕ್ಲು 9686597448, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ 9741958012, ಮೊರಾರ್ಜಿ ದೇಸಾಯಿ ವಸತಿ ಶಾಲೆ ತಿತಿಮತಿ 9164040035, ಮೊರಾರ್ಜಿ ದೇಸಾಯಿ ವಸತಿ ಶಾಲೆ ಆಲೂರು ಸಿದ್ದಾಪುರ 9901267635, ಜಿಲ್ಲಾ ಸಮನ್ವಯಾಧಿಕಾರಿಗಳು 9611307646, ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಇ-ಮೇಲ್: ಞeಚಿuಣhoಡಿiಣಥಿ-ಞಚಿ@ಟಿiಛಿ.iಟಿ ಸಹಾಯವಾಣಿ 080-23460460ನ್ನು ಸಂಪರ್ಕಿಸಬಹುದು.

ಪುಸ್ತಕ ಬಹುಮಾನಕ್ಕೆ

ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಮತ್ತಿತರ ಕಲಾಪ್ರಕಾರಗಳಲ್ಲಿ 2021ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ:01.01.2021 ರಿಂದ 31.12.2021ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ/ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಪುಸ್ತಕಕ್ಕೆ ರೂ. 25 ಸಾವಿರ ಬಹುಮಾನ ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಮತ್ತಿತರ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವ-ರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು 560002, ಇವರಿಗೆ 2022 ರ ಫೆಬ್ರವರಿ 23 ರೊಳಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ (ದೂ: 080-22113146) ಪಡೆಯಬಹುದು. ಅರ್ಜಿಗಳನ್ನು ಆಯಾಯ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.