ಮಡಿಕೇರಿ, ಫೆ. 12: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶುಕ್ರವಾರ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹಾಗೂ ಶುಶ್ರೂಷಕ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರುಗಳು ಹಾಗೂ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿ ವರ್ಗದವರುಗಳು ಬಳಸಲು ಸುಮಾರು ರೂ. 40 ಲಕ್ಷ ಮೌಲ್ಯದ ಅತ್ಯುನ್ನತ, ಉತ್ಕøಷ್ಟ ದರ್ಜೆಯ ಜಿಮ್ (ವ್ಯಾಯಾಮ ಉಪಕರಣಗಳು) ಶಾಲೆಯನ್ನು ಅನುಷ್ಟಾನಗೊಳಿಸಲಾಗಿದ್ದು, ಜಿಮ್‍ನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಉದ್ಘಾಟಿಸಲಾಗಿರುವ ಜಿಮನ್ನು ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲರೂ ಪರಿಣಾಮಕಾರಿಯಾಗಿ ಬಳಸಿಕೊಂಡು ಆರೋಗ್ಯ ಕಾಪಡಿಕೊಳ್ಳಲು ಕರೆ ನೀಡಿದರು ಪ್ರತಿದಿನ ಅರ್ಧ ಗಂಟೆ ವ್ಯಾಯಾಮಕ್ಕೆ ಸಮಯ ಮೀಸಲಿಡುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ. ಕೆ.ಬಿ. ಕಾರ್ಯಪ್ಪ, ಮುಖ್ಯ ಆಡಳಿತಾಧಿಕಾರಿ ಡಾ.ನಂಜುಂಡೆಗೌಡ, ಪ್ರಾಂಶುಪಾಲರು/ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವಿಶಾಲ್‍ಕುಮಾರ್, ವೈದ್ಯಕೀಯ ಅಧೀಕ್ಷಕರಾದ ಡಾ. ಎಸ್. ಮಂಜುನಾಥ, ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತು ವೈದ್ಯಕೀಯ ವಿದ್ಯಾರ್ಥಿಗಳು ಹಾಜರಿದ್ದರು.