ಮಡಿಕೇರಿ, ಫೆ. 13: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2022 ರ ಫೆಬ್ರವರಿ ಮಾಹೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ಒಂದು ದಿನದ ಉದ್ಯಮಶೀಲತಾ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಉದ್ಯಮಶೀಲತೆ, ಸೇವಾ, ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ಲಭ್ಯವಿರುವ ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳು, ಬ್ಯಾಂಕ್‍ಗಳಿಂದ ಸಿಗುವ ಸಾಲ ಸೌಲಭ್ಯಗಳು, ಕೈಗಾರಿಕಾ ನೀತಿಯನ್ವಯ ಸೌಲಭ್ಯಗಳು ಮುಂತಾದ ಯೋಜನೆಗಳ ಬಗ್ಗೆ ಈ ಅರಿವು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಗುವುದು.
ಕೈಗಾರಿಕಾ, ಸೇವಾ ಘಟಕಗಳನ್ನು ಪ್ರಾರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಕೊಡಗು ಜಿಲ್ಲೆ ಇವರ ಕಾರ್ಯಾಲಯದ ವತಿಯಿಂದ ನೋಂದಣಿ ಅರ್ಜಿ ಪಡೆದು ಭರ್ತಿ ಮಾಡಿ ಈ ಕಾರ್ಯಾಲಯಕ್ಕೆ ತಾ. 19 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಹಾಗೂ ದೂ. 08272-228431/ 228746 ನ್ನು ಸಂಪರ್ಕಿಸಬಹುದು. ನೋಂದಣಿ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಂಕರ ನಾರಾಯಣ ಅವರು ತಿಳಿಸಿದ್ದಾರೆ.