ಕರಿಕೆ,ಫೆ. 13 : ರಾಜ್ಯ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ನಾಗರ ಹೊಳೆ ರಾಷ್ಟ್ರೀಯ ಉದ್ಯಾನವನದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಸಿಗೆ ಕಾಡ್ಗಿಚ್ಚು ತಡೆ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಾಗರ ಹೊಳೆ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಗೋಪಾಲ್ ಎಂಟು ವಲಯಗಳಲ್ಲಿ ನಡೆಸಿರುವ ಬೆಂಕಿ ರೇಖೆ ಹಾಗೂ ತುರ್ತು ಸಂದರ್ಭದಲ್ಲಿ ಕಾರ್ಯಾಚರಣೆಗೆ ನೇಮಿಸಿರುವ ಅಗ್ನಿಶಾಮಕ ಯಂತ್ರ ಹಾಗೂ ಒಂದು ವಲಯಕ್ಕೆ ತಲಾ ಮೂವತ್ತರಿಂದ ನಲವತ್ತು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು ಅಲ್ಲದೇ ಬೆಂಕಿ ಕಾಣಿಸಿಕೊಂಡಾಗ ಕಾರ್ಯಾಚರಣೆಗೆ ನೇಮಿಸಿರುವ ಡ್ರೋನ್ ಕ್ಯಾಮರಾದ ಬಗ್ಗೆ ಕೂಡಾ ಮಾಹಿತಿ ನೀಡಿದರು. ಬೆಂಕಿ ರೇಖೆ ನಿರ್ಮಾಣ ಮಾಡುತ್ತಿರುವ ಕಾರ್ಮಿಕರ ಕುಂದು ಕೊರತೆ, ಸಮಸ್ಯೆಗಳನ್ನು ಕೂಡ ಇದೇ ಸಂದರ್ಭದಲ್ಲಿ ಅಧ್ಯಕ್ಷರು ವಿಚಾರಿಸಿದರು. -ಸುಧೀರ್ ಹೊದ್ದೆಟ್ಟಿ