ವೀರಾಜಪೇಟೆ, ಫೆ. 13: ಸಂಘಟಿತ ಮತ್ತು ಆಸಂಘಟಿತ ಕ್ಷೇತ್ರದಲ್ಲಿ ದುಡಿಯುವ ಪ್ರತಿಯೊಬ್ಬ ಕಾರ್ಮಿಕರು ಸರ್ಕಾರ ನೀಡಲಾಗುವ ಸವಲತ್ತುಗಳಿಂದ ವಂಚಿತರಾಗ ಬಾರದು ಎಂದು ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಹೇಳಿದರು.

ನಗರದ ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕದ ವತಿಯಿಂದ ನಗರದ ಗಣಪತಿ ಆರ್ಕಿಡ್ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಕಾರ್ಮಿಕ ಘಟಕದ ಪದಾಧಿಕಾರಿಗಳ ಪದಗ್ರಹಣ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಗಮಿಸಿ ಮಾತನಾಡಿದ ರಂಜಿ ಪೂಣಚ್ಚ ಅವರು, ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರುಗಳಿಗೆ ಸರ್ಕಾರದಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿಯ ಕೊರತೆಯಿದೆ. ಮಾಹಿತಿಗಳನ್ನು ಅರಿಯಲು ಸಂಘಟಿತರಾಗಬೇಕು.ಇಲಾಖೆಗಳಿಗೆ ಕಾರ್ಮಿಕರು ನಿಖರ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳು ವಂತಾಗಬೇಕು ಎಂದು ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಗೋವಿಂದರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕರಿಗಾಗಿ ವಿವಿಧ ಅಭಿವೃದ್ಧಿ ಯೋಜನೆಗಳು ಜಾರಿಗೆ ತಂದಿದೆ.ಈ ನಿಟ್ಟಿನಲ್ಲಿ ಹೊಸತಾಗಿ ಇ-ಶ್ರಮ್ ಕಾರ್ಡ್ ಮಾಡಿಸಲು ಕಾರ್ಮಿಕರು ಮುಂದಾಗಬೇಕು. ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಸ್ವ ಉದ್ಯೋಗ ಯೋಜನೆಗೆ ಅನುದಾನ, ಮದುವೆಗೆ ಸಹಾಯಧನ ಅಪಘಾತ ವಿಮೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳು ಅನುಷ್ಟಾನ ಗೊಂಡರು ಕಾರ್ಮಿಕರು ಸವಲತ್ತು ಪಡೆದುಕೊಳ್ಳುವಲ್ಲಿ ಸಫಲರಾಗಿಲ್ಲ. ವಿವಿಧ ವಲಯಗಳಲ್ಲಿ ಗುರುತಿಸಿ ಕೊಂಡಿರುವ ಕಾರ್ಮಿಕರು ಸಂಘಟಿತರಾಗಬೇಕು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮ ಉದ್ದೇಶಿಸಿ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಮತ್ತು ಪೊನ್ನಂಪೇಟೆ ವಲಯ ಕಾರ್ಮಿಕ ಘಟಕ ಅಧ್ಯಕ್ಷ ಎಸ್.ಟಿ. ಗಿರೀಶ್ ಮಾತನಾಡಿದರು. ನಗರ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷೆ ಭಾಗಿರತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಗರ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಮತ್ತು ವಿವಿಧÀ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಷೆ ಸೇರ್ಪಡೆಗೊಂಡರು.

ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ರಾಮದಾಸ್ ಸ್ವಾಗತಿಸಿ ನಿರೂಪಿಸಿದರು, ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಗಾಯತ್ರಿ ನರಸಿಂಹ ಅವರು ವಂದಿಸಿದರು. ಸಮಾರಂಭದಲ್ಲಿ ವಿವಿಧ ಘಟಕದ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.