ಮಡಿಕೇರಿ, ಫೆ. ೧೪: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೦೨೧-೨೨ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿ ಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ ಹಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳು, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಕನಿಷ್ಟ ೧ ಎಕರೆ ಹಾಗೂ ಗರಿಷ್ಠ ೫ ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ಅತೀ ಸಣ್ಣ ರೈತರಾಗಿದ್ದು, ವಾರ್ಷಿಕ ವರಮಾನ ರೂ.೪೦ ಸಾವಿರಗಳ ಮಿತಿಯಲ್ಲಿರಬೇಕು. ವೈಯಕ್ತಿಕ ನೀರಾವರಿ ಕೊಳವೆ ಬಾವಿಗಳಿಗೆ ಘಟಕ ವೆಚ್ಚ ರೂ.೨.೫೦ ಲಕ್ಷ ನಿಗಧಿಪಡಿಸಿದ್ದು, ಇದರಲ್ಲಿ ರೂ. ೨ ಲಕ್ಷ ಸಹಾಯಧನ ಹಾಗೂ ರೂ.೫೦ ಸಾವಿರಗಳ ಶೇ.೪ ರ ಬಡ್ಡಿ ದರದಲ್ಲಿ ಸಾಲ ಒಳಗೊಂಡಿರುತ್ತದೆ.
ಗಂಗಾ ಕಲ್ಯಾಣ ಯೋಜನೆಯಲ್ಲಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು ನಿಗಮದ ವೆಬ್ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಬಹುದು. ಅರ್ಜಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಾಡ್ರಿಗಸ್ ಕಟ್ಟಡದ ಎದುರು, ರೇಸ್ ಕೋರ್ಸ್ ರಸ್ತೆ, ಮಡಿಕೇರಿ ಇಲ್ಲಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್ ೭ ರೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ದೂ. ೦೮೨೭೨-೨೨೧೬೫೬ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.