ಸೋಮವಾರಪೇಟೆ, ಫೆ. ೧೪ : ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಇಲ್ಲಿನ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿ ಗಳನ್ನು ಸನ್ಮಾನಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷರು ಹಾಗೂ ಶ್ರವಣಬೆಳಗೊಳ ಕ್ಷೇತ್ರದ ಶಾಸಕರೂ ಆದ ಬಾಲಕೃಷ್ಣ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಬಾಲಕೃಷ್ಣ ಅವರು, ಬೆಂಗಳೂರಿನಲ್ಲಿ ಸಂಘದ ವತಿಯಿಂದ ಕೆಂಪೇಗೌಡ ವಿಶ್ವವಿದ್ಯಾ ನಿಲಯ ಸ್ಥಾಪನೆಗೆ ಕ್ರಮವಹಿಸ ಲಾಗಿದ್ದು, ಈಗಾಗಲೇ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದರು. ಮುಂದಿನ ಸಾಲಿನಿಂದ ಆಡಳಿತ ಮಂಡಳಿಗೆ ಮಹಿಳೆಯರಿಗೂ ಅವಕಾಶ ಕಲ್ಪಿಸಲಾಗುವುದು ಎಂದು ಬಾಲಕೃಷ್ಣ ತಿಳಿಸಿದರು.
ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಡಾ.ಅಂಜನಪ್ಪ, ಕಾರ್ಯಾಧ್ಯಕ್ಷ ಎಚ್.ಎನ್. ರವೀಂದ್ರ, ಪ್ರಧಾನ ಕಾರ್ಯದರ್ಶಿ ರೇಣುಕಾಪ್ರಸಾದ್, ಕಿಮ್ಸ್ ಅಧ್ಯಕ್ಷ ಉಮಾಪತಿ, ಪದಾಧಿಕಾರಿಗಳಾದ ಕೋನಪ್ಪ ರೆಡ್ಡಿ, ಪೂರ್ಣೇಶ್, ರಘುಗೌಡ, ಹನುಮಂತರಾಯಪ್ಪ ಅವರುಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಒಕ್ಕಲಿಗರ ಸಂಘ, ತಾಲೂಕು ಪ್ರಗತಿಪರ ಮಹಿಳಾ ವೇದಿಕೆ, ನಗರ ಒಕ್ಕಲಿಗರ ಸಂಘದ ಪ್ರಮುಖರು, ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ಕೋರಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಿದರು.
ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚAಗಪ್ಪ, ಕುವೆಂಪು ವಿದ್ಯಾಸಂಸ್ಥೆಯ ಕರೆಸ್ಪಾಡೆಂಟ್ ಜಗದೀಶ್, ಸಂಘದ ಪದಾಧಿಕಾರಿ ಗಣಪತಿ, ಕೆ.ಟಿ. ಪರಮೇಶ್ ಮತ್ತು ನಿರ್ದೇಶಕರುಗಳು ಉಪಸ್ಥಿತರಿದ್ದರು.