ಬೆAಗಳೂರು, ಫೆ. ೧೪: ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸೋಮವಾರ ವಿಚಾರಣೆಯನ್ನು ಮಂಗಳವಾರಕ್ಕೆ (ಇಂದು) ಮುಂದೂಡಿದೆ. ಸೋಮವಾರ ಮಧ್ಯಾಹ್ನ ವಿಚಾರಣೆ ಆರಂಭವಾಗುವ ಮುಂಚಿತವಾಗಿ, ಕರ್ನಾಟಕ ಉಚ್ಚ ನ್ಯಾಯಾಲಯವು ಮಾಧ್ಯಮಗಳಿಗೆ ಹೆಚ್ಚು ಜವಾಬ್ದಾರಿಯುತವಾಗಿ ನಡೆದುಕೊಳ್ಳಿ ಎಂದು ಮನವಿ ಮಾಡಿತು.

ಮಂಗಳವಾರ ಮಧ್ಯಾಹ್ನ ೨:೩೦ಕ್ಕೆ ಹೈಕೋರ್ಟ್ ಈ ಪ್ರಕರಣವನ್ನು ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ. ಈ ವಿಷಯದಲ್ಲಿ ಅಂತಿಮ ತೀರ್ಪು ಬರುವವರೆಗೆ ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್ ಅಥವಾ ಇತರ ಯಾವುದೇ ಧಾರ್ಮಿಕ ಸಂಕೇತದ ಉಡುಪು ಅನುಮತಿಸ ಬಾರದು ಎಂಬ ಹೈಕೋರ್ಟ್ ಕಳೆದ ವಾರ ಹೊರಡಿಸಿದ್ದ ಮಧ್ಯಂತರ ಆದೇಶವು ಮುಂದುವರಿದಿದೆ.