ಮಡಿಕೇರಿ, ಫೆ. ೧೫: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಜಿಲ್ಲಾ ಮಟ್ಟದಲ್ಲಿ ಮೂರು ತಿಂಗಳಿಗೊಮ್ಮೆ ಪರಿಶೀಲನಾ ಸಭೆ ನಡೆಸಲಾಗುತ್ತದೆ. ಅದಕ್ಕಾಗಿ ಜಿಲ್ಲಾ ಮಟ್ಟದ ತ್ರೆöÊಮಾಸಿಕ ಪರಿಶೀಲನಾ ಸಮಿತಿ(ಕೆಡಿಪಿ) ರಚನೆ ಮಾಡಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರುಗಳು, ಜಿಲ್ಲಾಧಿಕಾರಿಗಳು, ಜಿ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಸಮಕ್ಷಮ ನಡೆಯಲಿರುವ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪರಿಶೀಲನೆ ಚರ್ಚೆಗಳು ನಡೆಯುತ್ತವೆ. ಈ ಸಮಿತಿಗೆ ಸಾರ್ವಜನಿಕ ಪ್ರಮುಖರನ್ನು ಅಧಿಕಾರೇತರ ಸದಸ್ಯರುಗಳನ್ನಾಗಿ ಸರಕಾರದಿಂದ ನಾಮ ನಿರ್ದೇಶನ ಮಾಡಲಾಗುತ್ತದೆ. ಆದರೆ, ಇದೀಗ ಅರಣ್ಯ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿತನನ್ನು ನಾಮನಿರ್ದೇಶನ ಮಾಡಿರುವದು ಸಾಮಾಜಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ..!

ಜಿಲ್ಲಾ ಪಂಚಾಯ್ತಿ ವತಿಯಿಂದ ಅನುಷ್ಠಾನಗೊಳ್ಳುವ ಅಭಿವೃದ್ಧಿ ಕಾರ್ಯಗಳ ಪರಿಶೀಲನೆಗಾಗಿ ಕೆಡಿಪಿ ಸಮಿತಿ ಇದ್ದು, ಮೂರು ತಿಂಗಳಿಗೊಮ್ಮೆ ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ (೨೦ ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಜಿಲ್ಲಾ ಪಂಚಾಯ್ತಿ ಅಧೀನದಲ್ಲಿರುವ ಎಲ್ಲಾ ಇಲಾಖೆಗಳ ಕಾರ್ಯ ಪ್ರಗತಿ ಬಗ್ಗೆ ಪರಿಶೀಲನೆ ಹಾಗೂ ಚರ್ಚೆಗಳು ನಡೆಯುತ್ತವೆ.

(ಮೊದಲ ಪುಟದಿಂದ) ಸಮಿತಿಗೆ ಅಧಿಕಾರೇತರ ಸದಸ್ಯರುಗಳನ್ನು ನೇಮಕ ಮಾಡಲಾಗುತ್ತದೆ. ಈ ಸದಸ್ಯರುಗಳಿಗೆ ಸಭೆಯಲ್ಲಿ ಸಮಸ್ಯೆಗಳ ಬಗ್ಗೆ, ವಿವಿಧ ಇಲಾಖೆಗಳ ಕಾರ್ಯ ಯೋಜನೆಗಳ ಬಗ್ಗೆ ಗಮನ ಸೆಳೆಯುವ, ಚರ್ಚಿಸುವ ಅಧಿಕಾರವೂ ಇದೆ. ಜಿಲ್ಲೆಯ ಜನಪ್ರತಿನಿಧಿಗಳ ಶಿಫಾರಸ್ಸಿನ ಆಧಾರದಲ್ಲಿ ಸದಸ್ಯರುಗಳನ್ನು ನಾಮನಿರ್ದೇಶನ ಮಾಡಲಾಗುತ್ತದೆ. ಬೇರೆ ಬೇರೆ ವರ್ಗಗಳ ಸಾರ್ವಜನಿಕ ಪ್ರಮುಖರನ್ನು ನೇಮಕ ಮಾಡಲಾಗುತ್ತದೆ. ಆದರೆ, ಈ ಬಾರಿ ನೇಮಕಗೊಂಡವರ ಪೈಕಿ ಅಕ್ರಮ ಹರಳು ಕಲ್ಲು ದಂಧೆಯಲ್ಲಿ ಆರೋಪಿತರ ಪಟ್ಟಿಯಲ್ಲಿರುವವರನ್ನು ನಾಮ ನಿರ್ದೇಶನ ಮಾಡಲಾಗಿದೆ..!

ಅರಣ್ಯ ಮೊಕದ್ದಮೆ..!

ಪರಿಶಿಷ್ಟ ವರ್ಗದಿಂದ ಸದಸ್ಯನನ್ನಾಗಿ ಬಾಗಮಂಡಲ, ತಣ್ಣಿಮಾನಿ ಗ್ರಾಮದ ಮಿಟ್ಟು ರಂಜಿತ್ ಎಂಬವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಮಿಟ್ಟು ರಂಜಿತ್ ಹೆಸರು ನಿಶಾನೆಮೊಟ್ಟೆಯಲ್ಲಿ ನಡೆಯುತ್ತಿರುವ ಅಕ್ರಮ ಹರಳು ಕಲ್ಲು ದಂಧೆಯಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿದೆ. ೨೦೨೦ರಲ್ಲಿ ನಡೆದ ಹರಳು ಕಲ್ಲು ಗಣಿಗಾರಿಕೆಗೆ ಸಂಬAಧಿಸಿದAತೆ ಎಂಟು ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಿರುವ ಅರಣ್ಯ ಇಲಾಖಾ ಅಧಿಕಾರಿಗಳು ಈರ್ವರನ್ನು ಬಂಧಿಸಿದ್ದರು. ಆರೋಪಿಗಳ ಪಟ್ಟಿಯಲ್ಲಿ ಮಿಟ್ಟು ರಂಜಿತ್ ಹೆಸರಿದ್ದು, ಮೊಕದ್ದಮೆ ಕೂಡ ದಾಖಲಾಗಿದೆ. ಭಾಗಮಂಡಲ ವಲಯ ಅರಣ್ಯಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸದೇ ಇದ್ದುದರಿಂದ ಯಾವದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಅರಣ್ಯಾಧಿಕಾರಿಗಳು ದೋಷಾರೋಪಣಾ ಪಟ್ಟಿ ಸಿದ್ಧಪಡಿಸುತ್ತಿದ್ದು, ನ್ಯಾಯಾಲಯಕ್ಕೆ ಸಲ್ಲಿಸಲು ತಯಾರಿ ನಡೆಸುತ್ತಿದ್ದಾರೆ..! ಸಚಿವರು, ಸಂಸದರು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ನಡೆಯುವ ಕೆಡಿಪಿ ಸಭೆಗೆ ಆರೋಪಿ ಸ್ಥಾನದಲ್ಲಿರುವವರನ್ನು ನಾಮ ನಿರ್ದೇಶನ ಮಾಡಿರುವದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಮೂಡಿಸಿದೆ..! ? ಸಂತೋಷ್