ಮಡಿಕೇರಿ, ಫೆ. ೧೪: ಮಡಿಕೇರಿ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೧೨ ರಾಜಾಸೀಟ್ ಫೀಡರ್‌ನಲ್ಲಿ ಡಿಸಿ ಕಚೇರಿ ಹತ್ತಿರ ತಡೆಗೋಡೆ ಕಾಮಗಾರಿ ಹಾಗೂ ತುರ್ತು ನಿರ್ವಹಣೆ ಕಾರ್ಯ ನಡೆಸಬೇಕಾಗಿರುವುದರಿಂದ ತಾ. ೧೫ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಮಂಗಳೂರು ರಸ್ತೆ, ಡಿ.ಸಿ. ಕಚೇರಿ, ರೇಸ್ ಕೋರ್ಸ್ ರಸ್ತೆ, ಇಂದಿರಾನಗರ, ಚಾಮುಂಡೇಶ್ವರಿ ನಗರ, ರಾಜಾಸೀಟ್ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.