ಮಡಿಕೇರಿ, ಫೆ. ೧೫: ತಾ. ೧೬ ರಿಂದ (ಇಂದಿನಿAದ) ಪದವಿ ಪೂರ್ವ, ಪದವಿ ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆ ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರ ಜೊತೆ ಸಮಾಲೋಚನಾ ಸಭೆಯು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಉಪಸ್ಥಿತಿಯಲ್ಲಿ ನಡೆಯಿತು.
ಕಾಲೇಜುಗಳಲ್ಲಿ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಮಾಡದೆ, ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಿ, ತರಗತಿಗೆ ಕಡ್ಡಾಯ ಸಮವಸ್ತç ಧರಿಸುವಂತೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಜಗತ್ ತಿಮ್ಮಯ್ಯ, ಪದವಿಪೂರ್ವ
(ಮೊದಲ ಪುಟದಿಂದ) ಕಾಲೇಜಿನ ಪಾಂಶುಪಾಲ ದಿವಾಕರ, ಬಸಪ್ಪ, ಅಂಥೋಣಿ ಇತರರು ಹಲವು ಮಾಹಿತಿ ನೀಡಿದರು.
ವಿಚಾರಣೆ ಇಂದಿಗೆ ಮುಂದೂಡಿಕೆ
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ನ ತ್ರಿಸದಸ್ಯ ಪೀಠ ವಿಚಾರಣೆಯನ್ನು ಬುಧವಾರಕ್ಕೆ (ಇಂದಿಗೆ) ಮುಂದೂಡಿದೆ.
ಇAದು ಸಹ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ದೇವದತ್ ಕಾಮತ್ ತಮ್ಮ ವಾದ ಮಂಡಿಸಿದರು. ದೇಶ-ವಿದೇಶಗಳ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ಕಾಮತ್ ವಾದ ಮಂಡಿಸಿದ್ದು ಸುದೀರ್ಘ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ತಿ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್, ನ್ಯಾ. ಖಾಜಿ ಜೇಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ ಈಗ ಮತ್ತೆ ಪ್ರಕರಣದ ವಿಚಾರಣೆಯನ್ನು ತಾ. ೧೬ಕ್ಕೆ ಮುಂದೂಡಿದೆ.