ಮಡಿಕೇರಿ, ಫೆ.೧೫ : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ತಾ. ೨೧ ಮತ್ತು ೨೨ ರಂದು ನಡೆಯಲಿದೆ.

ವಾರ್ಷಿಕೋತ್ಸವದ ಅಂಗವಾಗಿ ತಾ. ೨೧ ರಂದು ಸಂಜೆ ೫ ಗಂಟೆಯಿAದ ಪ್ರಸಾದ ಸಿದ್ಧಿ, ರಕ್ಷೆÆÃಘ್ನ ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ (ದಿಕ್ಪಾಲಕ ಬಲಿ), ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

ತಾ.೨೨ ರಂದು ಬೆಳಿಗ್ಗೆ ೮ ಗಂಟೆಯಿAದ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆ ನಡೆಯಲಿದ್ದು, ಮಧ್ಯಾಹ್ನ ೧೨ ಗಂಟೆಗೆ ಮಹಾ ಪೂಜೆ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಾಲಯ ಟ್ರಸ್ಟ್ನ ಅಧ್ಯಕ್ಷರು ಮತ್ತು ಕಾರ್ಯದರ್ಶಿ ತಿಳಿಸಿದ್ದಾರೆ.