ಮಡಿಕೇರಿ, ಫೆ. ೧೪: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರನ್ನು ನೇಮಿಸಬೇಕೆಂದು ಒತ್ತಾಯಿಸಿರುವ ಸುಂಟಿಕೊಪ್ಪ ನಾಗರಿಕರು ತಪ್ಪಿದಲ್ಲಿ ಪಕ್ಷಾತೀತವಾಗಿ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಂಟಿಕೊಪ್ಪದ ಇಸಾಕ್‌ಖಾನ್, ಸುಂಟಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ಪ್ರತಿದಿನ ನೂರಾರು ರೋಗಿಗಳು ಆಗಮಿಸುತ್ತಿದ್ದಾರೆ. ಆದರೆ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿಂದಾಗಿ ಪ್ರಥಮ ಚಿಕಿತ್ಸೆ ದೊರೆಯದೆ ಹಲವು ಮಂದಿ ಮೃತಪಟ್ಟಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ವೈದ್ಯರ ಕೊರತೆಯಿಂದ ಪ್ರಥಮ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಅಪಘಾತ ಸಂಭವಿಸಿ ಚಿಕಿತ್ಸೆ ಲಭಿಸದೆ ಬಾಲಕನೊಬ್ಬ ಮೃತಪಟ್ಟ ಘಟನೆಯೂ ನಡೆದಿದೆ. ಗರ್ಭಿಣಿ ಮಹಿಳೆಯೊಬ್ಬರು ತಮ್ಮ ಮಗುವನ್ನು ಕಳೆದುಕೊಂಡ ಘಟನೆಗಳು ಸಂಭವಿಸಿವೆ.

ಈಗಾಗಲೇ ಸಂಬAಧಪಟ್ಟ ಅಧಿಕಾರಿಗಳಿಗೆ, ಶಾಸಕರಿಗೆ, ಸಂಸದರಿಗೆ, ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ, ಪ್ರತಿಭಟಿಸ ಲಾಗಿದೆ. ಆದರೂ ಇದುವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಇದೇ ರೀತಿ ಮುಂದುವರಿದರೆ ತಾ. ೧೫ ರಂದು ಬೆಳಿಗ್ಗೆ ೧೧ ಗಂಟೆಯಿAದ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದೆಂದು ಅವರು ಹೇಳಿದರು.

ಸುಂಟಿಕೊಪ್ಪ ಗ್ರಾ.ಪಂ. ಸದಸ್ಯ ಶಬೀರ್ ಮಾತನಾಡಿ, ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯೊಂದಿಗೆ ತಕ್ಷಣ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಯಾವುದೇ ಆ್ಯಂಬ್ಯುಲೆನ್ಸ್ಗಳಿಲ್ಲದಿರುವುದರಿAದ ಕೂಡಲೇ ಆ್ಯಂಬ್ಯುಲೆನ್ಸ್ ಒದಗಿಸಬೇಕು. ಆಕ್ಸಿಜನ್ ವ್ಯವಸ್ಥೆಯಾಗಬೇಕು, ಮರಣೋತ್ತರ ಪರೀಕ್ಷಾ ಕೊಠಡಿ ದುರಸ್ತಿಯಾಗಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭ ಕಪ್ಪುಪಟ್ಟಿ ಧರಿಸಿ ಮೌನಾಚರಣೆ ಮೂಲಕ ಪುಲ್ವಾಮ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಸುಂಟಿಕೊಪ್ಪ ನಾಗರಿಕ ಜಿ.ಬಿ. ಹರೀಶ್, ತಾ.ಪಂ. ಮಾಜಿ ಅಧ್ಯಕ್ಷ ಕೆ.ಈ. ಕರೀಂ, ಮಾಜಿ ಸದಸ್ಯ ಕೆ.ಐ. ರಫೀಕ್, ಕಾರ್ಮಿಕ ಘಟಕದ ಅಧ್ಯಕ್ಷ ಹೆಚ್.ಎಂ. ಸುರೇಶ್ ಉಪಸ್ಥಿತರಿದ್ದರು.