ಮಡಿಕೇರಿ, ಫೆ. ೧೬: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬAಧಿಸಿದAತೆ ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು ಕಾಲೇಜುಗಳು ಪುನರಾರಂಭಗೊAಡಿದ್ದು, ಶನಿವಾರಸಂತೆ ಹಾಗೂ ಕುಶಾಲನಗರ, ಸುಂಟಿಕೊಪ್ಪ, ನೆಲ್ಲಿಹುದಿಕೇರಿಯಲ್ಲಿ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರು ನ್ಯಾಯಾಲಯದ ಆದೇಶದಂತೆ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸಲು ಅವಕಾಶ ಸಿಗದ ಕಾರಣ ಮನೆಗಳಿಗೆ ಮರಳಿದ ಘಟನೆ ನಡೆದಿದೆ. ಉಳಿದಂತೆ ಎಲ್ಲೆಡೆ ಸಾಂಗವಾಗಿ ತರಗತಿಗಳು ನಡೆದಿವೆ.ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಪ್ರಾಂಶುಪಾಲರಾದಿಯಾಗಿ ಉಪನ್ಯಾಸಕರು ಕಾಲೇಜಿನ ಗೇಟಿನ ಬಳಿ ನಿಂತು ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬರುವವರ ಬಗ್ಗೆ ನಿಗಾ ವಹಿಸಿದ್ದರು. ಪೊಲೀಸರು ಕೂಡ ಕಟ್ಟೆಚ್ಚರ ವಹಿಸಿದ್ದರು. ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದರಾದರೂ ಅದನ್ನು ಕಳಚಿಟ್ಟು ವಿದ್ಯಾರ್ಥಿನಿಯರು ತರಗತಿಗಳಲ್ಲಿ ಪಾಲ್ಗೊಂಡರು. ಈ ಹಿನ್ನೆಲೆಯಲ್ಲಿ ಯಾವುದೇ ಗೊಂದಲಗಳು ಉಂಟಾಗಲಿಲ್ಲ. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೂಡ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು.
ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ೬ ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಇಂದು ಬೆಳಿಗ್ಗೆ ಕಾಲೇಜಿಗೆ ಪ್ರವೇಶ ದೊರೆಯದೆ ಮನೆಗೆ ಮರಳಿದರು. ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ೧೦ ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಇಂದು ಬೆಳಿಗ್ಗೆ ೬ ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಾಗ, ಕಾಲೇಜಿನ ಪ್ರಾಂಶುಪಾಲ ಇ.ಎಂ. ದಯಾನಂದ
(ಮೊದಲ ಪುಟದಿಂದ) ಹಾಗೂ ಉಪನ್ಯಾಸಕರು ವಿದ್ಯಾರ್ಥಿನಿಯರನ್ನು ಕುರಿತು ಹೈಕೋರ್ಟ್ ಆದೇಶವಿದೆ. ಆದ್ದರಿಂದ ಹಿಜಾಬ್ ತೆಗೆದು ತರಗತಿಗಳಿಗೆ ತೆರಳುವಂತೆ ಮನವೊಲಿಸಿದರು.
ಆದರೆ ವಿದ್ಯಾರ್ಥಿನಿಯರು ಮಾತ್ರ ಯಾವುದೇ ಕಾರಣಕ್ಕೂ ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು, ಮನೆಯಲ್ಲಿ ಹಿಜಾಬ್ ಧರಿಸಲು ಹೇಳಿದ್ದಾರೆ. ಹಿಜಾಬ್ ತೆಗೆಯುವುದಾದರೆ ಕಾಲೇಜಿಗೆ ಹೋಗಬೇಡಿ ಎನ್ನುತ್ತಾರೆ. ನಮಗೆ ವಿದ್ಯಾಭ್ಯಾಸದ ಜೊತೆಗೆ ಹಿಜಾಬ್ ಸಹ ಮುಖ್ಯ ಎಂದು ಹೇಳಿ ತಮ್ಮ ಮನೆಗಳಿಗೆ ತೆರಳಿದರು. ಶನಿವಾರಸಂತೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್. ಪರಶಿವಮೂರ್ತಿ ಹಾಗೂ ಸಿಬ್ಬಂದಿಗಳು ಬಂದೋಬಸ್ತ್ ಏರ್ಪಡಿಸಿದ್ದರು.
ನೆಲ್ಲಿಹುದಿಕೇರಿಯಲ್ಲಿ
ನೆಲ್ಲಿಹುದಿಕೇರಿಯ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು ೫೦ ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಅವರ ಪೈಕಿ ೩೪ ಮಂದಿ ಇಂದು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಈ ವೇಳೆ ನ್ಯಾಯಾಲಯದ ಆದೇಶದಂತೆ ಹಿಜಾಬ್ ತೆಗೆದು ತರಗತಿಗೆ ಬರುವಂತೆ ಸೂಚಿಸಲಾಯಿತಾದರೂ, ಹಿಜಾಬ್ ತಗೆಯಲು ನಿರಾಕರಿಸಿದ ವಿದ್ಯಾರ್ಥಿನಿಯರು ತಮ್ಮ ಮನೆಗಳಿಗೆ ಹಿಂತಿರುಗಿದರು.
ನೆಲ್ಲಿಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಮೂರನೇ ದಿನವೂ ವಾಪಸ್ ಕಳುಹಿಸಿದ ಘಟನೆ ನಡೆಯಿತು.
ಶಾಲೆಯ ೪೫ ವಿದ್ಯಾರ್ಥಿನಿಯರ ಪೈಕಿ ೩೮ ಮಂದಿ ಹಿಜಾಬ್ ಧರಿಸಿ ಬಂದಿದ್ದರು. ಆದರೆ ಕೋರ್ಟ್ ಆದೇಶದಂತೆ ಹಿಜಾಬ್ ಧರಿಸಿ ಶಾಲೆಯ ಒಳಗೆ ಪ್ರವೇಶಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಶಾಲೆಯ ಆವರಣದಲ್ಲಿ ಕುಳಿತುಕೊಂಡರು. ಕೆಲವು ಪೋಷಕರು ಆಗಮಿಸಿ ಮಕ್ಕಳಿಗೆ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರೂ ಅವಕಾಶ ನೀಡಲಿಲ್ಲ.
ಶಾಲೆಯ ಆವರಣದಲ್ಲೆ ಕುಳಿತು ವಿದ್ಯಾರ್ಥಿನಿಯರು ಓದಿದರು. ಸ್ಥಳಕ್ಕೆ ಸೋಮವಾರಪೇಟೆ ತಾಲೂಕು ಶಿಕ್ಷಣಾಧಿಕಾರಿ ಹೇಮಂತ್ ಭೇಟಿ ನೀಡಿದರು. ಈ ಸಂದರ್ಭ ವಿದ್ಯಾರ್ಥಿನಿಯರ ಪೋಷಕರು ತಮ್ಮ ಮಕ್ಕಳು ಹಿಂದಿನಿAದಲೂ ಹಿಜಾಬ್ ಹಾಕಿ ಶಾಲೆಗೆ ಬರುತ್ತಿದ್ದರು. ಈಗಾಗಲೇ ವಿದ್ಯಾರ್ಥಿಗಳು ತರಗತಿಗಳಿಂದ ದೂರ ಉಳಿದಿದ್ದಾರೆ. ನಮ್ಮ ಮಕ್ಕಳಿಗೆ ಶಿಕ್ಷಣವೂ ಬೇಕು, ಹಿಜಾಬ್ ಬೇಕು ಆದ್ದರಿಂದ ಅವಕಾಶ ಕೊಡಿ ಎಂದು ಮನವಿ ಮಾಡಿದರು. ಈ ಸಂದರ್ಭ ಶಿಕ್ಷಣಾಧಿಕಾರಿ ಹೇಮಂತ್ ಮಾತನಾಡಿ, ಹಿಜಾಬ್ ವಿಷಯದ ಕುರಿತು ನ್ಯಾಯಾಲಯದಲ್ಲಿ ಮಧ್ಯಂತರ ಆದೇಶವಿದ್ದು ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕೆಂದು ಮನವಿ ಮಾಡಿದರು. ನಂತರ ಶಿಕ್ಷಕರೊಂದಿಗೆ ಸಭೆ ನಡೆಸಿದರು.
ಸೋಮವಾರಪೇಟೆ: ಸೋಮವಾರಪೇಟೆ ವ್ಯಾಪ್ತಿಯ ಕಾಲೇಜುಗಳಲ್ಲಿ ಯಾವುದೇ ಗೊಂದಲಗಳಿಲ್ಲದೆ ತರಗತಿಗಳು ನಡೆದವು. ತಾಲೂಕು ತºಶೀಲ್ದಾರ್ ಗೋವಿಂದರಾಜು ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಮಹೇಶ್ ಸೇರಿದಂತೆ ಸಿಬ್ಬಂದಿ ಕಾಲೇಜುಗಳಿಗೆ ತೆರಳಿ ಪರಿಶೀಲಿಸಿದರು.
ಇಲ್ಲಿನ ಯಡೂರು ಬಿಟಿಸಿಜಿ ಕಾಲೇಜಿನಲ್ಲಿ ಕಳೆದ ತಾ.೮ರಂದು ಹಿಜಾಬ್ ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ್ದ ಸಂದರ್ಭ ಕಾಲೇಜಿನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದ್ದ ವಿದ್ಯಾರ್ಥಿನಿಯರನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಲ್ಯದೊಂದಿಗೆ ತರಗತಿ ಪ್ರವೇಶಕ್ಕೆ ಯತ್ನಿಸಿದ್ದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಾಂಶುಪಾಲರು ಅಂದಿನಿAದ ಕಾಲೇಜಿಗೆ ರಜೆ ಘೋಷಿಸಿದ್ದರು.
ಇಂದು ಮತ್ತೆ ಕಾಲೇಜು ಆರಂಭಗೊAಡಿದ್ದು, ಕಾಲೇಜಿನಲ್ಲಿರುವ ನಾಲ್ವರು ಮುಸ್ಲಿಂ ವಿದ್ಯಾರ್ಥಿನಿಯರ ಪೈಕಿ, ಮೂವರು ಹಿಜಾಬ್ ಧರಿಸುತ್ತಿದ್ದರು. ಈ ಪೈಕಿ ಇಂದು ಈರ್ವರು ವಿದ್ಯಾರ್ಥಿನಿಯರು ಕಾಲೇಜಿಗೆ ಗೈರಾಗಿದ್ದರು. ಓರ್ವ ವಿದ್ಯಾರ್ಥಿನಿ ಈ ಹಿಂದಿನಿAದಲೂ ಸಮವಸ್ತçದೊಂದಿಗೆ ಆಗಮಿಸುತ್ತಿದ್ದು, ಆಕೆ ಎಂದಿನAತೆ ತರಗತಿಯಲ್ಲಿ ಪಾಲ್ಗೊಂಡಿದ್ದಳು.
ಉಳಿದAತೆ ಸಂತ ಜೋಸೆಫರ ಕಾಲೇಜಿನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿನಿಯರ ಪೈಕಿ ಎಲ್ಲರೂ ತರಗತಿಗೆ ಹಾಜರಾದರು. ಚಾಣಕ್ಯ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿನಿಯರಿದ್ದು, ಯಾರೂ ಕೂಡ ಈ ಹಿಂದಿನಿAದಲೂ ಹಿಜಾಬ್ ಧರಿಸುತ್ತಿರಲಿಲ್ಲ. ಇಂದು ಈರ್ವರು ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸಿದ್ದರೆ, ಉಳಿದ ಈರ್ವರು ಅನಾರೋಗ್ಯ ಹಿನ್ನೆಲೆ ಗೈರಾಗಿದ್ದರು.
ಕಾಲೇಜುಗಳಿಗೆ ಭೇಟಿ ನೀಡಿದ ತಹಶೀಲ್ದಾರ್ ಗೋವಿಂದರಾಜು ಅವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರೊಂದಿಗೆ ಪರಿಸ್ಥಿತಿಯ ಬಗ್ಗೆ ಅವಲೋಕಿಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಹಿಜಾಬ್ ವಿವಾದ ಹೈಕೋರ್ಟ್ ನಲ್ಲಿ ವಿಚಾರಣೆಯ ಹಂತದಲ್ಲಿದ್ದು, ಈ ನಡುವೆ ಹೊರಬಂದಿರುವ ಮಧ್ಯಂತರ ಆದೇಶದಲ್ಲಿ ಶಾಲಾ ಕಾಲೇಜಿನ ತರಗತಿಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಧರಿಸಲು ಅವಕಾಶ ನೀಡಿಲ್ಲ. ಈ ಹಿನ್ನೆಲೆ ಎಲ್ಲಾ ವಿದ್ಯಾರ್ಥಿಗಳು ನ್ಯಾಯಾಲಯದ ಆದೇಶ ಪಾಲಿಸಬೇಕು. ವಿದ್ಯಾರ್ಥಿಗಳು ಇತರ ವಿಚಾರ ದತ್ತ ಗಮನ ಹರಿಸದೇ ವಿದ್ಯಾಭ್ಯಾಸದಲ್ಲಿ ತೊಡಗಿ ಪರೀಕ್ಷೆಗಳಿಗೆ ಸಿದ್ದರಾಗುವಂತೆ ಕಿವಿಮಾತು ಹೇಳಿದರು.
ಕುಶಾಲನಗರದಲ್ಲಿ ವಾಪಸಾದ ವಿದ್ಯಾರ್ಥಿನಿಯರು
ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ್ದ ೧೧ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ ಮನೆಗೆ ಕಳುಹಿಸಿರುವ ಬಗ್ಗೆ ವರದಿಯಾಗಿದೆ.
ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ೬ ವಿದ್ಯಾರ್ಥಿನಿಯರು, ಅನುಗ್ರಹ ಕಾಲೇಜಿನಲ್ಲಿ ನಾಲ್ಕು ವಿದ್ಯಾರ್ಥಿನಿಯರು ಹಾಗೂ ಮಹಾತ್ಮ ಗಾಂಧಿ ಡಿಗ್ರಿ ಕಾಲೇಜಿನ ಓರ್ವ ವಿದ್ಯಾರ್ಥಿನಿ ಹಿಜಾಬ್ ಧರಿಸಿ ತರಗತಿಗೆ ಬಂದ ಸಂದರ್ಭ ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ಅವರಿಗೆ ತಿಳಿಹೇಳಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಅವರುಗಳನ್ನು ತರಗತಿಗೆ ಸೇರಿಸಲಿಲ್ಲ ಎಂದು ತಿಳಿದು ಬಂದಿದೆ.
ಸುAಟಿಕೊಪ್ಪದಲ್ಲಿ
ಸುAಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿಗೆ ೫ ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪ್ರವೇಶಿಸಿದ್ದು ಪ್ರಾಂಶುಪಾಲರು, ಅಧ್ಯಾಪಕರುಗಳು ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಹೈಕೋರ್ಟಿನ ಮಧ್ಯಂತರ ಆದೇಶ ಹಾಗೂ ಸರಕಾರ ಆದೇಶದ ಬಗ್ಗೆ ತಿಳಿಹೇಳಿ ಪೋಷಕರನ್ನು ಕರೆಯಿಸಿ ಮಾತುಕತೆ ನಡೆಸಿದರು. ಈ ಹಿನ್ನೆಲೆಯಲ್ಲಿ ಪೋಷಕರುಗಳು ಹೈಕೋರ್ಟ್ನ ತೀರ್ಪು ಬಂದ ನಂತರ ಕಾಲೇಜಿಗೆ ಕಳುಹಿಸುವುದಾಗಿ ತಿಳಿಸಿ ವಿದ್ಯಾರ್ಥಿನಿಯರನ್ನು ಮನೆಗೆ ಕರೆದುಕೊಂಡು ಹೋದರು.
ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ೨೦೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಬುಧವಾರ ತರಗತಿ ಆರಂಭವಾಗಿ ೧೦೮ ವಿದ್ಯಾರ್ಥಿಗಳು ಗೈರಾಗಿದ್ದು, ೯೨ ಮಂದಿ ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದರು. ೨೮ ಮಂದಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರಿದ್ದು ಅದರಲ್ಲಿ ೫ ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಾಗ ಪೊಲೀಸರು ಅವರನ್ನು ತಡೆದರು. ಆಗ ಪ್ರಾಚಾರ್ಯ ಜಾನ್ ಹಾಗೂ ಅಧ್ಯಾಪಕರುಗಳು ಮಕ್ಕಳನ್ನು ಪ್ರತ್ಯೇಕ ಕೊಠಡಿಗೆ ಕರೆಸಿಕೊಂಡು ಸರಕಾರದ, ಹೈಕೋರ್ಟಿನ ನಿಯಮ ನಾವು ಪಾಲಿಸಬೇಕು. ಹಿಜಾಬ್ ಧರಿಸಿ ಕಾಲೇಜಿಗೆ ಬರಬೇಡಿ ಎಂದರು. ವಿದ್ಯಾರ್ಥಿನಿಯರ ಪೋಷಕರನ್ನು ಕರೆಯಿಸಿ ಸರಕಾರದ ನಿಯಮ ಪಾಲಿಸಬೇಕು ಎಂದು ವಿವರಿಸಿದರು. ಆದರೆ ಪೋಷಕರು ನಮ್ಮ ಧರ್ಮದ ಸಂಪ್ರದಾಯ ನಾವು ಪಾಲಿಸಬೇಕಾಗುತ್ತದೆ. ಹೈಕೋರ್ಟ್ ತೀರ್ಪು ಬಂದ ನಂತರವೇ ನಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸುವುದಾಗಿ ಹೇಳಿ ಮಕ್ಕಳನ್ನು ಕರೆದೊಯ್ದರು.
ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು
ವೀರಾಜಪೇಟೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಇಂದು ಹದಿನೇಳು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು.
ಕಾಲೇಜಿನ ಪ್ರಾರ್ಥನೆಯ ಬಳಿಕ ಪ್ರಾಂಶುಪಾಲರು ತರಗತಿಗೆ ಬಂದು ವಿದ್ಯಾರ್ಥಿನಿಯರಿಗೆ ಕೋರ್ಟ್ ಆದೇಶದ ಬಗ್ಗೆ ತಿಳಿಹೇಳಿದರು. ಆದರೂ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ಒಪ್ಪದ ಕಾರಣ ಅವರು ತರಗತಿಯಲ್ಲಿ ಕೂರಲು ಸಾಧ್ಯವಿಲ್ಲ ಎಂದು ತಿಳಿಸಲಾಗಿ ಇಬ್ಬರು ವಿದ್ಯಾರ್ಥಿನಿಯರು ಮಾತ್ರ ಹಿಜಾಬ್ ತೆಗೆದು ತರಗತಿಯಲ್ಲಿ ಕುಳಿತರು. ಉಳಿದ ಹದಿನೈದು ವಿದ್ಯಾರ್ಥಿನಿಯರು ತರಗತಿಯಿಂದ ಹೊರಗೆ ಹೋದರು ಎಂದು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ ಬೋಪಯ್ಯ ತಿಳಿಸಿದ್ದಾರೆ.