ಕೂಡಿಗೆ, ಫೆ. ೧೬: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಲುಗುಪ್ಪೆ ಗ್ರಾಮದಲ್ಲಿ ಈಗಾಗಲೇ ಕಾಯ್ದಿರಿಸಿರುವ ಜಾಗದಲ್ಲಿ ಎರಡೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಘನ ತ್ಯಾಜ್ಯ ಸಂಸ್ಕರಣಾ ಘಟಕವನ್ನು ತೆರೆಯಲು ಚಿಂತನೆ ಮಾಡಲಾಗಿದೆ. ಅದಕ್ಕೆ ಸಂಬAಧಿಸಿದ ಎಲ್ಲಾ ರೀತಿಯ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

ತೊರೆನೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಡಿಜಿಟಲ್ ಗ್ರಂಥಾಲಯ ಮಾಹಿತಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಲುಗುಪ್ಪೆ ಗ್ರಾಮದಲ್ಲಿ ಎಂಆರ್‌ಎಫ್ ಯೋಜನೆ ಅಡಿಯಲ್ಲಿ ಪ್ರಥಮವಾಗಿ ಎರಡು ಎಕರೆ ಪ್ರದೇಶದಲ್ಲಿ ಘನ ಒಣ ತ್ಯಾಜ್ಯ ವಸ್ತುಗಳ ಸಂಸ್ಕರಣಾ ಘಟಕವನ್ನು ಆರಂಭ ಮಾಡಲು ಬೇಕಾಗುವ ಎಲ್ಲಾ ಪ್ರಕ್ರಿಯೆಗಳು ನಡೆದಿವೆ.

ಜಾಗದ ಸರ್ವೆ ಕಾರ್ಯವನ್ನು ಸಂಪೂರ್ಣಗೊಳಿಸಲು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ. ಇದರ ಜೊತೆಯಲ್ಲಿ ಘಟಕಕ್ಕೆ ಸಂಬAಧಿಸಿದ ಯೋಜನೆಗೆ ಆಧುನಿಕ ತಂತ್ರಜ್ಞಾನದ ಯಂತ್ರಗಳ ಖರೀದಿ ಮಾಡುವ ಪ್ರಕ್ರಿಯೆ ರಾಜ್ಯಮಟ್ಟದ ಅಧಿಕಾರಿಗಳಿಂದ ನಡೆಯುತ್ತಿದೆ ಎಂದು ಶಾಸಕರು ತಿಳಿಸಿದರು.

ಈ ಘಟಕದ ಯೋಜನೆಯು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಸ್ವಚ್ಛ ಭಾರತ್ ಅನುದಾನವನ್ನು ಬಳಕೆ ಮಾಡಲಾಗುತ್ತದೆ.

ರಾಜ್ಯ ಸರ್ಕಾರದ ನಿಯಮಾನುಸಾರವಾಗಿ ನಡೆಯಲು ಸಂಬAಧಿಸಿದ ಇಲಾಖೆ ಮೂಲಕ ಸರಕಾರಕ್ಕೆ ಪ್ರಸ್ತಾವನೆ ಹೋಗಿದ್ದು, ಜಾಗವನ್ನು ಗುರುತಿಸಲಾಗಿದೆ.

ಕಂದಾಯ ಇಲಾಖೆ ವತಿಯಿಂದ ಸರ್ವೆ ಕಾರ್ಯ ಮುಗಿದ ನಂತರ ಸಂಬAಧಿಸಿದ ಇಲಾಖೆಯವರು ಎರಡು ಎಕರೆ ಪ್ರದೇಶದಲ್ಲಿ ಘಟಕವನ್ನು ಆರಂಭ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದು ವಿವರಿಸಿದರು.

- ಕೆ.ಕೆ. ನಾಗರಾಜಶೆಟ್ಟಿ