ಸೋಮವಾರಪೇಟೆ, ಫೆ. ೧೭: ಜಾತ್ಯತೀತ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಜಿಲ್ಲೆಯ ಮೂರು ಕೇಂದ್ರಗಳಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲು ಪಕ್ಷದ ಪ್ರಮುಖರ ಸಭೆಯಲ್ಲಿ ನಿರ್ಧರಿಸಲಾಯಿತು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಅವರು, ಪಕ್ಷಕ್ಕಾಗಿ ಕೆಲಸ ಮಾಡುವ ಹಾಗೂ ನಾಯಕತ್ವದ ಗುಣಗಳನ್ನು ಹೊಂದಿರುವ ಪ್ರತಿಯೋರ್ವ ಕಾರ್ಯಕರ್ತರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಸಂಘಟಿಸಲಾಗುವುದು. ಪಕ್ಷಕ್ಕೆ ಕಾರ್ಯಕರ್ತರೇ ಆಸ್ತಿಯಾಗಿದ್ದು, ಗ್ರಾಮ ಮಟ್ಟದಿಂದಲೇ ಪಕ್ಷವನ್ನು ಬಲಪಡಿಸಲಾಗುವುದು ಎಂದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮತ್ತು ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷದ ವಿರುದ್ಧ ಜನಸಾಮಾನ್ಯರು ಅಸಮಾಧಾನಿತರಾಗಿ ದ್ದಾರೆ. ರಾಷ್ಟಿçÃಯ ಪಕ್ಷಗಳ ಆಡಳಿತ ದಿಂದ ಬೇಸತ್ತಿರುವ ಮತದಾರರು ಪ್ರಾದೇಶಿಕ ಪಕ್ಷದತ್ತ ಒಲವು ಹೊಂದಿ ದ್ದಾರೆ. ಜೆಡಿಎಸ್ ಮುಖಂಡರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಕೈಗೊಂಡ ಜನಪರ ಯೋಜನೆಗಳನ್ನು ಜನರು ಇಂದಿಗೂ ಮರೆತಿಲ್ಲ ಎಂದು ಗಣೇಶ್ ಅಭಿಪ್ರಾಯಿಸಿದರು.

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಕೊಡಗಿನಲ್ಲಿಯೂ ಜೆಡಿಎಸ್ ಬಲಿಷ್ಠವಾಗಿದ್ದು, ಪಕ್ಷದ ತತ್ವ, ಸಿದ್ದಾಂತ ಒಪ್ಪಿ ಇತರ ಪಕ್ಷಗಳಿಂದ ಆಗಮಿಸುವ ಮುಖಂಡರು ಹಾಗೂ ಕಾರ್ಯಕರ್ತ ರನ್ನು ಸ್ವಾಗತಿಸಲಾಗುವುದು. ಆ ಮೂಲಕ ಪಕ್ಷವನ್ನು ಬಲಿಷ್ಠಗೊಳಿಸಲಾ ಗುವುದು. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಎಂದು ಭರವಸೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಮುಖಂಡ ನಾಪಂಡ ಮುತ್ತಪ್ಪ ಮಾತನಾಡಿ, ಎಲ್ಲರ ವಿಶ್ವಾಸಗಳಿಸಿ ಪಕ್ಷವನ್ನು ಬಲಪಡಿಸಬೇಕಿದೆ. ಸದ್ಯದಲ್ಲಿಯೇ ಜಿಲ್ಲೆಯ ೩ ಕಡೆಗಳಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುವುದು. ಕಾರ್ಯಕರ್ತರಲ್ಲಿ ಆತ್ಮಸ್ಥೆöÊರ್ಯ ತುಂಬುವ ಕೆಲಸ ಮಾಡಲಾಗುವುದು. ಚುನಾವಣೆಗಾಗಿ ಈಗಿನಿಂದಲೇ ಪಕ್ಷವನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರೂ ಶ್ರಮವಹಿಸಬೇಕು ಎಂದರು.

ಸಭೆಯಲ್ಲಿ ಪಕ್ಷದ ಮುಖಂಡರಾದ ಡಿ.ಪಿ. ಬೋಜಪ್ಪ, ತಾಲೂಕು ಅಧ್ಯಕ್ಷ ನಾಗರಾಜ್, ಕುಶಾಲನಗರ ತಾಲೂಕು ಅಧ್ಯಕ್ಷ ರವಿ, ವಕ್ತಾರ ಕಾಟ್ನಮನೆ ವಿಠಲ್‌ಗೌಡ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ ಖಾನ್, ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಸಿ.ಎಲ್. ವಿಶ್ವ, ತಾಲೂಕು ಅಧ್ಯಕ್ಷ ತ್ರಿಶೂಲ್, ಪದಾಧಿಕಾರಿಗಳಾದ ಸುರೇಶ್, ಪ್ರವೀಣ್, ಸುಮಂತ್, ಆದರ್ಶ್ ತಮ್ಮಯ್ಯ, ಆದಿಲ್ ಪಾಷಾ, ಯಡೂರು ನಾಗರಾಜ್, ಭರತ್ ಭೀಮಯ್ಯ, ಯಡೂರು ರಕ್ಷಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.