ಸೋಮವಾರಪೇಟೆ, ಫೆ. ೧೭: ರಾಜ್ಯ ಸರ್ಕಾರವು ಸರ್ಕಾರಿ ಭೂಮಿಗಳನ್ನು ಖಾಸಗಿ ಹಾಗೂ ಬೃಹತ್ ಉದ್ದಿಮೆಗಳಿಗೆ ಬಾಡಿಗೆ ನೀಡಲು ಮುಂದಾಗಿರುವ ಕ್ರಮವನ್ನು ಖಂಡಿಸಿ, ಸರ್ಕಾರ ಜಾಗವನ್ನು ನಿವೇಶನ ರಹಿತರಿಗೆ ನೀಡಬೇಕೆಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದಿಂದ ತಾ. ೧೮ರಂದು (ಇಂದು) ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ಮುಖಂಡ ಹೆಚ್.ಎಂ. ಸೋಮಪ್ಪ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಅನೇಕ ದಶಕಗಳಿಂದ ನಿವೇಶನಕ್ಕಾಗಿ ಹೋರಾಟ ಮಾಡುತ್ತಾ ಬಂದಿದ್ದರೂ ಸಹ ಸರ್ಕಾರಗಳು ನಿವೇಶನ ರಹಿತರಿಗೆ ಭೂಮಿ ನೀಡಿಲ್ಲ. ಆದರೆ ಇದೀಗ ಸರ್ಕಾರಿ ಜಾಗಗಳನ್ನು ಖಾಸಗಿ ಹಾಗೂ ಬೃಹತ್ ಉದ್ದಿಮೆಗಳಿಗೆ ಬಾಡಿಗೆ ಆಧಾರದಲ್ಲಿ ನೀಡಲು ಮುಂದಾಗಿರುವುದು ಖಂಡನೀಯ ಎಂದರು.
ರಾಜ್ಯದಲ್ಲಿರುವ ೩೯ ಲಕ್ಷ ಎಕರೆ ಸರ್ಕಾರಿ ಜಾಗವನ್ನು ಇಂತಹ ಕಂಪೆನಿಗಳಿಗೆ ಬಾಡಿಗೆ ಆಧಾರದಲ್ಲಿ ನೀಡುವ ಷಡ್ಯಂತ್ರö ನಡೆಯುತ್ತಿದೆ. ಈ ಸಂಬAಧ ಉಪ ಸಮಿತಿಯನ್ನು ರಚಿಸುವ ಬಗ್ಗೆ ಕಂದಾಯ ಇಲಾಖಾ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸರ್ಕಾರಕ್ಕೆ ಬಡವರ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲ ಎಂಬುದು ಇದರಿಂದ ಸಾಬೀತಾಗುತ್ತಿದೆ ಎಂದು ಸೋಮಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಈಗಾಗಲೇ ರಾಜ್ಯ ಸರ್ಕಾರದಿಂದ ನಿವೇಶನ ರಹಿತರ ಸಮೀಕ್ಷೆ ಮಾಡಲಾಗಿದೆ. ರಾಜ್ಯದಲ್ಲಿ ಲಕ್ಷಾಂತರ ಕಾರ್ಮಿಕರು ಮತ್ತು ದುಡಿಯುವ ವರ್ಗಕ್ಕೆ ನಿವೇಶನ ಇಲ್ಲವಾಗಿದೆ. ಕೊಡಗಿನಲ್ಲಿಯೂ ಸಾವಿರಾರು ಮಂದಿ ನಿರ್ಗತಿಕರು ನಿವೇಶನಕ್ಕಾಗಿ ಗ್ರಾ.ಪಂ.ಗೆ ಅರ್ಜಿ ಹಾಕಿದ್ದಾರೆ. ಸ್ವಾತಂತ್ರö್ಯ ಬಂದು ೭೫ ವರ್ಷ ಕಳೆದರೂ ನೆಲೆ ಇಲ್ಲದಂತಾಗಿದೆ. ಹೀಗಿದ್ದರೂ ಸರ್ಕಾರಿ ಜಾಗವನ್ನು ಬಡವರಿಗೆ ನೀಡಲು ಸರ್ಕಾರ ಕ್ರಮವಹಿಸಿಲ್ಲ ಎಂದು ಆರೋಪಿಸಿದರು.
ಸರ್ಕಾರವು ಕಂಪೆನಿಗಳಿಗೆ ಜಾಗ ನೀಡುವ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಕಾರ್ಮಿಕರು, ನಿರ್ಗತಿಕರು, ಸಣ್ಣ ರೈತರ ಬಗ್ಗೆ ಕಾಳಜಿ ವಹಿಸಬೇಕೆಂದು ಆಗ್ರಹಿಸಿ ತಾ.೧೮ರಂದು ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ಕಕ್ಕೆಹೊಳೆ ಜಂಕ್ಷನ್‌ನಿAದ ಪ್ರತಿಭಟನಾ ಮೆರವಣಿಗೆ ಹೊರಟು, ತಾಲೂಕು ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದರು. ಗೋಷ್ಠಿಯಲ್ಲಿ ಪಕ್ಷದ ಕಾರ್ಯದರ್ಶಿ ಸುಂದರ್, ಸೂರಿಗಾಗಿ ಸಮಿತಿ ಅಧ್ಯಕ್ಷ ಅಣ್ಣಪ್ಪ, ಸರೋಜ, ಸಬಾನ ಅವರುಗಳು ಉಪಸ್ಥಿತರಿದ್ದರು.