ಮಡಿಕೇರಿ, ಫೆ. ೧೭: ಸಹಕಾರ ಭಾರತಿ ರಾಜ್ಯ ಕಾರ್ಯಕಾರಿಣಿ ಸಭೆ ಬಾಗಲಕೋಟೆಯಲ್ಲಿ ನಡೆದ ಸಭೆಯಲ್ಲಿ ಸಹಕಾರ ಭಾರತೀಯ ರಾಜ್ಯ ಅಧ್ಯಕ್ಷ ರಾಜಶೇಖರ್ ಸಜ್ಜನ್ ಅವರು ಎನ್.ಎ. ರವಿ ಬಸಪ್ಪ ಅವರನ್ನು ಸಹಕಾರ ಭಾರತೀಯ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ರವಿ ಬಸಪ್ಪ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ನಾಪಂಡ ಉಮೇಶ್ ಉತ್ತಪ್ಪ, ಪ್ರಧಾನ ಕಾರ್ಯದರ್ಶಿ ಕನ್ನಂಡ ಸಂಪತ್ ಉಪಸ್ಥಿತರಿದ್ದರು.