ನಾಪೋಕ್ಲು, ಫೆ. ೧೭: ಸಮೀಪದ ಬೇತು ಗ್ರಾಮದ ನಿವಾಸಿ ಪ್ರಸ್ತುತ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ವಾಸವಿದ್ದ ಕುಟ್ಟಂಜೆಟ್ಟಿರ ದಿಲೀಪ್ (೬೨) ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಬಗ್ಗೆ ವರದಿಯಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಬೆಂಗಳೂರಿ ನಲ್ಲಿಯೇ ನಡೆಯಲಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.