ಕೂಡಿಗೆ, ಫೆ. ೧೬: ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ದೇವತೆ ಮಟ್ಟಿಗಮ್ಮ ದೇವಾಲಯದ ಕಾಮಗಾರಿ ಒಂದು ಕೋಟಿ ವೆಚ್ಚದಲ್ಲಿ ನಡೆಯುತ್ತಿದ್ದು, ಶಾಸಕ ಅಪ್ಪಚ್ಚು ರಂಜನ್ ಗ್ರಾಮಸ್ಥರೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ದೇವಾಲಯ ಅಭಿವೃದ್ಧಿಗೆ ಸರಕಾರದ ವಿವಿಧ ಯೋಜನೆಯಡಿಯಲ್ಲಿ ಅನುದಾನ ಒದಗಿಸುವ ಭರವಸೆಯನ್ನು ಅವರು ನೀಡಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶ್ರೀನಿವಾಸ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜಯಣ್ಣ, ದೇವಾಲಯ ಸಮಿತಿ ಅಧ್ಯಕ್ಷ ರುದ್ರಪ್ಪ, ಕಾರ್ಯದರ್ಶಿ ಮಹೇಶ್, ಕಟ್ಟಡ ಸಮಿತಿ ಅಧ್ಯಕ್ಷ ಪ್ರಸನ್ನ, ಕಾರ್ಯದರ್ಶಿ ಬಸವಣ್ಣಯ್ಯ, ಸಹಕಾರ ಸಂಘದ ಅಧ್ಯಕ್ಷ ಲೋಕೇಶ್, ಮಾಜಿ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ, ಗೌರವಾಧ್ಯಕ್ಷ ಕಾಳಿಂಗಪ್ಪ ಸೇರಿದಂತೆ ಸಮಿತಿಯ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.