ಮಡಿಕೇರಿ, ಫೆ. ೧೬: ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬAಧಿಸಿದAತೆ ಅಮಾನತ್ತುಪಡಿಸಿಕೊಂಡ ೮೫ ಚೀಲ ರೋಬಾಸ್ಟ ಕಾಫಿಯನ್ನು ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲು ಅವಕಾಶ ನೀಡಲಾಗಿದೆ ಎಂದು ವೀರಾಜಪೇಟೆ ಪೊಲೀಸ್ ವೃತ್ತ ನಿರೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಫಿ ಮಾರಾಟದಿಂದ ಬರುವ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಮಾಡುವಂತೆ ಪೊನ್ನಂಪೇಟೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯವೂ ಆದೇಶ ಮಾಡಿದ ಹಿನ್ನೆಲೆ ತಾ. ೧೮ ರಂದು ಬೆಳಿಗ್ಗೆ ೧೧ ಗಂಟೆಗೆ ಪೊನ್ನಂಪೇಟೆ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ಮೂಲಕ ಮಾರಾಟ ಮಾಡಲಾಗುವುದು. ಆಸಕ್ತ ಕಾಫಿ ವ್ಯಾಪಾರಸ್ಥರು ನಗದು ಹಣದೊಂದಿಗೆ ಹಾಜರಾಗಿ ಮಾರಾಟ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.