ವಿಚಾರಣೆಯ ನೇರ ಪ್ರಸಾರಕ್ಕೆ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು, ಫೆ. ೧೮: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಸಂಬAಧಿಸಿದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ನ ಪೂರ್ಣ ಪೀಠವು ವಿಚಾರಣೆಯ ನೇರ ಪ್ರಸಾರವನ್ನು ನಿರ್ಬಂಧಿಸುವ ಮನವಿಯನ್ನು ಶುಕ್ರವಾರ ತಿರಸ್ಕರಿಸಿದೆ. ಕಲಾಪ ಆರಂಭವಾದ ತಕ್ಷಣ, ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು, ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ಪ್ರಶ್ನಿಸಿ ಮುಸ್ಲಿಂ ಹುಡುಗಿಯರನ್ನು ಪ್ರತಿನಿಧಿಸುತ್ತಿದ್ದು, ಈ ವಿಚಾರಣೆಯ ಲೈವ್ ಸ್ಟಿçÃಮಿಂಗ್ (ನೇರ ಪ್ರಸಾರ) ಅವಲೋಕನಗಳನ್ನು ಸಂದರ್ಭದಿAದ ಹೊರಗಿಡುವುದರಿಂದ ಸಮಾಜದಲ್ಲಿ ಸಾಕಷ್ಟು ಅಶಾಂತಿ ಉಂಟಾಗುತ್ತಿದೆ ಎಂದು ಪ್ರತಿಪಾದಿಸಿದರು. ಅಲ್ಲದೆ ಲೈವ್ ಸ್ಟಿçÃಮಿಂಗ್ ನೈತಿಕತೆಯ ವಿರುದ್ಧವಾಗಿದ್ದು, ಅರ್ಜಿದಾರ ಮಕ್ಕಳನ್ನು ಕಷ್ಟಕ್ಕೆ ತಳ್ಳುವ ಅಪಾಯವಿದೆ ಎಂದು ವಾದಿಸಿದ್ದಾರೆ. ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ನ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಜೆ.ಎಂ. ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಂ. ದೀಕ್ಷಿತ್ ಅವರನ್ನು ಒಳಗೊಂಡ ಪೂರ್ಣ ಪೀಠವು ಪ್ರತಿವಾದಿಗಳ ನಿಲುವು ಏನು ಎಂಬುದನ್ನು ಜನರು ಅರ್ಥಮಾಡಿಕೊಳ್ಳಲಿ ಎಂದು ಹೇಳಿತು. ಅಂತೆಯೇ ಕೆಲವು ಹೊಸ ಅರ್ಜಿಗಳು ಸಲ್ಲಿಕೆಯಾಗಿದ್ದರಿಂದ, ಹೊಸ ಅರ್ಜಿಗಳ ವಕೀಲರು ಕೇವಲ ೧೦ ನಿಮಿಷಗಳನ್ನು ತೆಗೆದುಕೊಳ್ಳುತ್ತಾರೆ. ಆದ್ದರಿಂದ ಪ್ರತಿವಾದಿಗಳನ್ನು ಸಹ ಆಲಿಸಬಹುದು ಎಂದು ನ್ಯಾಯಮೂರ್ತಿ ಅವಸ್ತಿ ಅರ್ಜಿದಾರರಿಗೆ ಮನವಿ ಮಾಡಿದರು.

ಬಾಂಬ್ ಸ್ಫೋಟ ಪ್ರಕರಣ-೨೮ ಅಪರಾಧಿಗಳಿಗೆ ಮರಣದಂಡನೆ

ಅಹಮದಾಬಾದ್, ಫೆ. ೧೮: ೨೦೦೮ರಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬAಧಪಟ್ಟAತೆ ೪೯ ಅಪರಾಧಿಗಳ ಪೈಕಿ ೩೮ ಅಪರಾಧಿಗಳಿಗೆ ವಿಶೇಷ ಕೋರ್ಟ್ ಮರಣದಂಡನೆ ವಿದಿಸಿದೆ. ೧೧ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜುಲೈ ೨೬, ೨೦೦೮ ರಂದು ೭೦ ನಿಮಿಷಗಳ ಅವಧಿಯಲ್ಲಿ ಅಹಮದಾಬಾದ್‌ನ ವಿವಿಧ ಪ್ರದೇಶಗಳಲ್ಲಿ ೨೦ ಬಾಂಬ್‌ಗಳು ಸ್ಫೋಟಗೊಂಡಿದ್ದವು. ಸ್ಫೋಟಗಳಲ್ಲಿ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದೀನ್ ಸದಸ್ಯರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದರು. ೨೦೦೨ರ ಗೋಧ್ರಾ ನಂತರದ ಗಲಭೆಗೆ ಪ್ರತೀಕಾರವಾಗಿ ಐಎಂ ಭಯೋತ್ಪಾದಕರು ಸ್ಫೋಟಕ್ಕೆ ಯೋಜನೆ ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದರು. ಜುಲೈ ೨೬, ೨೦೦೮ ರಂದು ಅಹಮದಾಬಾದ್ ನಗರದಲ್ಲಿ ಸರಣಿ ಸ್ಫೋಟ ನಡೆದಿತ್ತು. ಅದರಲ್ಲಿ ೫೬ ಜನರು ಮೃತರಾಗಿದ್ದರೆ, ೨೦೦ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬAಧಪಟ್ಟAತೆ ನ್ಯಾಯಾಲಯವು ಫೆಬ್ರವರಿ ೮, ೨೦೨೨ ರಂದು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು. ೨೦೦೮ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ ೭೭ ಆರೋಪಿಗಳ ಪೈಕಿ ೨೮ ಮಂದಿಯನ್ನು ಗುಜರಾತ್‌ನ ವಿಶೇಷ ನ್ಯಾಯಾಲಯ ಫೆಬ್ರವರಿ ೮ ರಂದು ಖುಲಾಸೆಗೊಳಿಸಿತ್ತು. ಉಳಿದ ೪೯ ಜನರನ್ನು ಅಪರಾಧಿಗಳೆಂದು ಘೋಷಿಸಲಾಗಿತ್ತು. ಇಸ್ಲಾಮಿಕ್ ಭಯೋತ್ಪಾದಕ ಗುಂಪು, ಹರ್ಕತ್-ಉಲ್-ಜಿಹಾದ್-ಅಲ್-ಇಸ್ಲಾಮಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಈ ಪ್ರಕರಣಕ್ಕೆ ಸಂಬAಧಿಸಿದAತೆ ಗುಜರಾತ್ ಪೊಲೀಸರು ಈ ಹಿಂದೆ ೮೫ ಜನರನ್ನು ಬಂಧಿಸಿದ್ದರು. ಆದರೆ, ೭೮ ಜನರ ವಿರುದ್ಧ ಮಾತ್ರ ವಿಚಾರಣೆ ಪ್ರಾರಂಭವಾಗಿತ್ತು. ಆರೋಪಿಗಳ ಮೇಲೆ ಕೊಲೆ, ಕ್ರಿಮಿನಲ್ ಪಿತೂರಿಯ ಆರೋಪಗಳನ್ನು ಹೊರಿಸಲಾಗಿತ್ತು.

ಈಶ್ವರಪ್ಪ ವಜಾಕ್ಕೆ ಆಗ್ರಹ-ಕಲಾಪ ಮುಂದೂಡಿಕೆ

ಬೆAಗಳೂರು, ಫೆ. ೧೮: ರಾಷ್ಟçಧ್ವಜ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಅವಮಾನ ಮಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿAದ ವಜಾಗೊಳಿಸಬೇಕೆಂದು ಆಗ್ರಹಿಸಿ ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕರು ಅಹೋರಾತ್ರಿ ಧರಣಿ ಶುಕ್ರವಾರ ಮತ್ತೆ ಗದ್ದಲ, ಕೋಲಾಹಲದಲ್ಲಿ ಮುಂದುವರಿದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪ ಸೋಮವಾರ ಬೆಳಿಗ್ಗೆ ೧೧ಕ್ಕೆ ಮುಂದೂಡಲಾಗಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನು ಮುಂದುವರಿಸಲಾಗದೆ ಸೋಮವಾರಕ್ಕೆ ಮುಂದೂಡಿದ್ದಾರೆ. ಧರಣಿ ಬಿಟ್ಟು ಕಲಾಪದಲ್ಲಿ ಭಾಗಿಯಾಗುವಂತೆ ಸ್ಪೀಕರ್ ಮನವಿ ಮಾಡಿದ್ದರು. ಸಿಎಂ, ಮಾಜಿ ಸಿಎಂ ಮಾತಿಗೂ ಕಾಂಗ್ರೆಸ್ ನಾಯಕರು ಜಗ್ಗದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕರ ಮನವೊಲಿಕೆಗೆ ಸ್ಪೀಕರ್ ಮುಂದಾಗಿದ್ದರೆ, ಸ್ಪೀಕರ್ ನೇತೃತ್ವದ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಆದರೆ ಎಷ್ಟೇ ಮನವೊಲಿಕೆ ಪ್ರಯತ್ನ ಮಾಡಿದರು ಒಪ್ಪದ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪ ಸೋಮವಾರಕ್ಕೆ ಮುಂದೂಡಿದ್ದಾರೆ.

ರಹಸ್ಯ ದಾಖಲೆಗಳ ಸೋರಿಕೆ-ಐಪಿಎಸ್ ಅಧಿಕಾರಿ ಬಂಧನ

ನವದೆಹಲಿ, ಫೆ. ೧೮: ನಿಷೇಧಿತ ಲಷ್ಕರ್ ಇ-ತೊಯ್ಬಾ ಸಂಘಟನೆಯ ಉಗ್ರರಿಗೆ ರಹಸ್ಯ ದಾಖಲೆಗಳ ಸೋರಿಕೆ ಆರೋಪದ ಮೇರೆಗೆ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಐಪಿಎಸ್ ಅಧಿಕಾರಿ ಅರವಿಂದ್ ದಿಗ್ವಿಜಯ್ ನೇಗಿ ಅವರನ್ನು ಶುಕ್ರವಾರ ರಾಷ್ಟಿçÃಯ ತನಿಖಾ ತಂಡ ಬಂಧಿಸಿದೆ ಎಂದು ಅದರ ಅಧಿಕೃತ ವಕ್ತಾರರು ತಿಳಿಸಿದ್ದಾರೆ. ೨೦೧೧ರಲ್ಲಿ ಐಪಿಎಸ್ ಆಗಿ ಮುಂಬಡ್ತಿ ಪಡೆದಿದ್ದ ನೇಗಿ ಅವರನ್ನು ಕಳೆದ ವರ್ಷ ನವೆಂಬರ್ ೬ ರಂದು ಎನ್‌ಐಎ ದಾಖಲಿಸಿದ್ದ ಪ್ರಕರಣವೊಂದರಲ್ಲಿ ಬಂಧಿಸಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.