ಚೆಟ್ಟಳ್ಳಿ, ಫೆ. ೧೮: ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಹಾಗೂ ಮಿಲನ್ಸ್ ಫುಟ್ಬಾಲ್ ಕ್ಲಬ್ ಅಮ್ಮತ್ತಿ ಸಹಯೋಗದಲ್ಲಿ ಅಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿ, ಕೋವಿಡ್ ಲಾಕ್‌ಡೌನ್ ಕಾರಣದಿಂದ ಸ್ಥಗಿತಗೊಂಡಿದ್ದ ಜಿಲ್ಲಾಮಟ್ಟದ ಲೀಗ್ ಫುಟ್ಬಾಲ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯಗಳು ತಾ. ೧೯ ಮತ್ತು ೨೦ ರಂದು ನಡೆಯಲಿದೆ.
ತಾ. ೨೦ ರಂದು ಮಧ್ಯಾಹ್ನ ೩ ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭವನ್ನು ರಾಜ್ಯ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನಸಭೆ ಸದಸ್ಯ ಕೆ.ಎ ಹ್ಯಾರಿಸ್ ಉದ್ಘಾಟನೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಸ್ಪೀಕರ್, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಎಂ.ಪಿ. ಸುಜಾ ಕುಶಾಲಪ್ಪ, ಭಾರತ ಫುಟ್ಬಾಲ್ ತಂಡದ ಮಾಜಿ ಆಟಗಾರ ಅಣ್ಣಪ್ಪ ಕುಮಾರ್, ರಾಜ್ಯ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಸತ್ಯನಾರಾಯಣ, ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಅಂರ‍್ರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ, ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಮಹಾಪೋಷಕರಾದ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ, ಅಮ್ಮತ್ತಿ ಫುಟ್ಬಾಲ್ ಕ್ಲಬ್‌ನ ಅಧ್ಯಕ್ಷ ಎ.ಎಸ್. ಶಿಜು, ರಾಜ್ಯ ಫುಟ್ಬಾಲ್ ಸಂಸ್ಥೆಯ ಉಪಾಧ್ಯಕ್ಷ ಪಿ.ಕೆ. ಜಗದೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕಂಡ ವಿಜು ಸುಬ್ರಮಣಿ, ಕಾರ್ಮಾಡು ಅಮ್ಮತ್ತಿ ವಲಯ ಕಾಂಗ್ರೆಸ್ ಅಧ್ಯಕ್ಷ ಕುಟ್ಟಂಡ ಕೃಷ್ಣ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.