ಮಡಿಕೇರಿ, ಫೆ. ೧೮: ಅನುಸೂಚಿತ ಬುಡಕಟ್ಟು ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಅಧಿನಿಯಮ ಅನುಷ್ಠಾನ ಸಂಬAಧ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಸೋಮವಾರಪೇಟೆ ತಾಲೂಕಿನ ೩೦ ಅರಣ್ಯ ಹಕ್ಕುಪತ್ರಗಳಿಗೆ ಅನುಮೋದನೆ ನೀಡಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಸೋಮವಾರಪೇಟೆ ತಾಲೂಕಿನ ಪರಿಶಿಷ್ಟ ಪಂಗಡದ ೫ ವೈಯಕ್ತಿಕ ಅರಣ್ಯ ಹಕ್ಕುಪತ್ರ ಹಾಗೂ ಇತರೆ ಪಾರಂಪರಿಕ ಅರಣ್ಯ ವಾಸಿಗಳ ೨೫ ಅರಣ್ಯ ಹಕ್ಕುಪತ್ರಗಳಿಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಅನುಮೋದನೆ ನೀಡಿದರು.
ಉಳಿದಂತೆ ಮಡಿಕೇರಿ ತಾಲೂಕಿನ ೩೨ ಮತ್ತು ವೀರಾಜಪೇಟೆ ತಾಲೂಕಿನ ೫೦ ಅರಣ್ಯ ಹಕ್ಕುಪತ್ರಗಳ ಅರ್ಜಿಗಳ ಸಂಬAಧ ಪುನರ್ ಪರಿಶೀಲಿಸಿ ೧೫ ದಿನದೊಳಗೆ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯ ಮುಂದಿಡುವAತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ನಿರ್ದೇಶನ ನೀಡಿದರು. ಪ್ರತಿಯೊಂದು ಅರ್ಜಿಗಳಿಗೆ ಸಂಬAಧಿಸಿದAತೆ ಅರಣ್ಯ ಹಕ್ಕು ಕಾಯ್ದೆಯ ಸಂಬAಧ ನಿಖರ ಮಾಹಿತಿಯನ್ನು ಒದಗಿಸುವಂತೆ ಸೂಚಿಸಿದರು.
ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ, ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ನಿರ್ದೇಶಕ ಶ್ರೀನಿವಾಸ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ದಯಾನಂದ, ನೆಹರು, ಪಾಷಾ, ಉತ್ತಪ್ಪ, ಭೂ ದಾಖಲೆಗಳ ಉಪ ನಿರ್ದೇಶಕ ಪಿ. ಶ್ರೀನಿವಾಸ್, ತಾ.ಪಂ. ಇಒಗಳಾದ ಅಪ್ಪಣ್ಣ, ಜಯಣ್ಣ, ಐಟಿಡಿಪಿ ಪೊನ್ನಂಪೇಟೆ ತಾಲೂಕು ಅಧಿಕಾರಿ ಗುರುಶಾಂತಪ್ಪ, ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಬಾಲಕೃಷ್ಣ ರೈ, ಚಂದ್ರಪ್ಪ, ಕೊಡಗು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಇತರರು ಇದ್ದರು.