ಮಡಿಕೇರಿ, ಫೆ. ೧೮: ಚೆಂಬು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುಗ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ತಾ. ೧೯ರಂದು (ಇಂದು) ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಕಟ್ಟಡ ಉದ್ಘಾಟಿಸಲಿದ್ದು, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾಗವಹಿಸಲಿದ್ದಾರೆ. ಶಾಸಕರ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರುಗಳಾದ ಶಾಂತೆಯAಡ ವೀಣಾ ಅಚ್ಚಯ್ಯ, ಸುಜಾ ಕುಶಾಲಪ್ಪ, ಗ್ರಾ.ಪಂ. ಅಧ್ಯಕ್ಷೆ ಕುಸುಮಾ ಎ. ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.