ಮಡಿಕೇರಿ, ಫೆ. ೧೮: ನಗರೋತ್ಥಾನ ಯೋಜನೆಯಡಿ ಮಡಿಕೇರಿ ನಗರಸಭೆಗೆ ರೂ. ೪೦ ಕೋಟಿ ಬಿಡುಗಡೆಯಾಗಿದೆ. ಜೊತೆಗೆ ಮುಖ್ಯಮಂತ್ರಿ ಅವರ ವಿಶೇಷ ಪ್ಯಾಕೇಜ್‌ನಡಿ ರೂ. ೫ ಕೋಟಿ ಬಿಡುಗಡೆಯಾಗಿದ್ದು, ಈ ಸಂಬAಧ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ತಾ. ೧೯ ರಂದು (ಇಂದು) ಮಧ್ಯಾಹ್ನ ೧.೩೦ ರಿಂದ ಸಂಜೆ ೫ ಗಂಟೆಯವರೆಗೆ ನಗರದ ಎಲ್ಲಾ ವಾರ್ಡ್ಗಳಿಗೆ ಭೇಟಿ ನೀಡಲಿದ್ದಾರೆ.

ನಗರೋತ್ಥಾನ ಕಾಮಗಾರಿ ಸಂಬAಧ ಕ್ರಿಯಾಯೋಜನೆ ಅಂತಿಮಗೊಳಿಸುವ ನಿಟ್ಟಿನಲ್ಲಿ ನಗರದ ಎಲ್ಲಾ ವಾರ್ಡ್ಗಳಿಗೆ ಶಾಸಕರು ಭೇಟಿ ನೀಡಲಿದ್ದು, ಆಯಾಯ ವಾರ್ಡ್ಗಳಲ್ಲಿ ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬAಧಿಸಿದAತೆ ಸಾರ್ವಜನಿಕರು ಮನವಿ ಸಲ್ಲಿಸಬಹುದಾಗಿದೆ.

ನಗರದ ಎಲ್ಲಾ ವಾರ್ಡ್ಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಇರಲಿದ್ದಾರೆ. ಸಾರ್ವಜನಿಕರು ತಮ್ಮ ತಮ್ಮ ವಾರ್ಡ್ಗಳಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳಿಗೆ ಸಂಬAಧಿಸಿದAತೆ ಮನವಿ ನೀಡಬಹುದಾಗಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ಸದ್ಯದಲ್ಲಿಯೇ ಮಡಿಕೇರಿಗೆ ಆಗಮಿಸಲಿದ್ದಾರೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ತಿಳಿಸಿದರು.