ಸೋಮವಾರಪೇಟೆ, ಫೆ.೧೯: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾ.ಪಂ. ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕೃಷಿಕರು ಕಂಗಾಲಾಗಿದ್ದಾರೆ.

ಜನವಸತಿ ಹಾಗೂ ಕೃಷಿ ಪ್ರದೇಶದಲ್ಲಿ ಓಡಾಡುತ್ತಾ ಕೃಷಿ ಫಸಲು ನಷ್ಟಗೊಳಿಸುತ್ತಿರುವ ಆನೆಗಳನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ನಿನ್ನೆ ದಿನ ಗ್ರಾಮದ ಡಿ.ಕೆ.ಸಂಜು ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಮನಸೋಯಿಚ್ಚೆ ಓಡಾಡಿರುವ ಕಾಡಾನೆಗಳು, ಕಾಫಿ, ಬಾಳೆಗಿಡಗಳನ್ನು ಕಿತ್ತು ನಷ್ಟಪಡಿಸಿವೆ. ಇದರೊಂದಿಗೆ ಸ್ಪೆçà ಮಾಡಲೆಂದು ನೀರು ತುಂಬಿಸಿ ಇಟ್ಟಿದ್ದ ಡ್ರಮ್‌ಗಳನ್ನು ಉರುಳಿಸಿ ಜಖಂಗೊಳಿಸಿವೆ.

ಕೂತಿ ವ್ಯಾಪ್ತಿಯಲ್ಲಿ ಕಳೆದ ಕೆಲ ತಿಂಗಳುಗಳಿAದ ಬೀಡುಬಿಟ್ಟಿರುವ ೪ ಆನೆಗಳಿರುವ ಹಿಂಡು, ಕೃಷಿ ಫಸಲನ್ನು ನಷ್ಟಗೊಳಿಸುತ್ತಿದೆ. ಕಾಡಾನೆಗಳ ಹಾವಳಿಯಿಂದಾಗಿ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ಭಯಪಡುವಂತಾಗಿದೆ. ರೈತರಿಗೆ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಹಿನ್ನಡೆಯಾಗಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ಈ ಬಗ್ಗೆ ಅರಣ್ಯ ಇಲಾಖೆ ಗಮನಹರಿಸಿ, ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.