ಕೂಡಿಗೆ, ಫೆ. ೨೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ಆವರಣದಲ್ಲಿ ಮಾರ್ಚ್ ೧ ರಂದು ಮಹಾಶಿವರಾತ್ರಿ ಆಚರಣೆ ನಡೆಯಲಿದೆೆ.

ಅಂದು ದೇವಾಲಯದಲ್ಲಿ ಶ್ರೀ ಮಹಾಗಣಪತಿ ಹೋಮ, ಶ್ರೀ ಮಹಾ ಮೃತ್ಯುಂಜಯ ಹೋಮ, ರುದ್ರಹೋಮ ರುದ್ರಾಭಿಷೇಕ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ದೇವಾಲಯದ ಆವರಣದಲ್ಲಿ ನಡೆಯಲಿವೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.

ಆ ದಿನ ಸಂಜೆ ೪ ಗಂಟೆಗೆ ಶ್ರೀ ಉಮಾಮಹೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ಅಲಂಕೃತವಾದ ಭವ್ಯ ಮಂಟಪದಲ್ಲಿ ಪ್ರತಿಷ್ಠಾಪಿಸಿ ವಾದ್ಯ ಗೋಷ್ಠಿಯೊಂದಿಗೆ ಕ್ಷೇತ್ರದ ಪ್ರದಕ್ಷಿಣೆ, ನಂತರ ಹುದುಗೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಸ್ವಸ್ಥಳಕ್ಕೆ ಬರುವ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.