ಮಡಿಕೇರಿ, ಫೆ. ೨೦: ತಾ. ೨೭ ರಂದು ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು, ಲಸಿಕಾ ಅಭಿಯಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಪೂರ್ವ ಸಿದ್ಧತೆ ಸಂಬAಧ ಮಾಹಿತಿ ಪಡೆದು ಅವರು ಮಾತನಾಡಿದರು.

ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡಲಾಗುತ್ತಿದ್ದು, ಈ ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಹಕರಿಸುವಂತೆ ಅವರು ಸೂಚಿಸಿದರು.

ರೋಟರಿ, ಲಯನ್ಸ್ ಹಾಗೂ ವಿವಿಧ ಸಂಘ ಸಂಸ್ಥೆಗಳು ಪಲ್ಸ್ ಪೋಲಿಯೋ ಯಶಸ್ಸಿಗೆ ಸಹಕರಿಸು ವಂತೆ ಕೋರಿದರು. ಲೈನ್‌ಮನೆಗಳಲ್ಲಿ ಹೆಚ್ಚಿನ ಗಮನಹರಿಸಿ ಮಕ್ಕಳಿಗೆ ಲಸಿಕೆ ನೀಡುವಂತೆ ಅವರು ನಿರ್ದೇಶನ ನೀಡಿದರು.

ಪಲ್ಸ್ ಪೋಲಿಯೋ ಸಂಬAಧಿಸಿ ದಂತೆ ಸುದ್ದಿಗೋಷ್ಠಿ ಆಯೋಜಿ ಸುವುದು, ಆಕಾಶವಾಣಿಯಲ್ಲಿ ಪ್ರಸಾರ ಮಾಡುವುದು, ಗ್ರಾ.ಪಂ.ಗಳಲ್ಲಿಯೂ ಸಹ ಪಲ್ಸ್ ಪೋಲಿಯೋ ಹನಿ ಹಾಕಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಬಸ್ ನಿಲ್ದಾಣಗಳಲ್ಲಿ ಪೋಸ್ಟರ್ ಅಳವಡಿಸುವುದು, ಲೈನ್ ಮನೆಗಳಲ್ಲಿ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡುವುದು. ಆ ದಿಸೆಯಲ್ಲಿ ಬುಡಕಟ್ಟು ಕೃಷಿಕರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಗೋಪಿನಾಥ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ೫ ವರ್ಷದೊಳಗಿನ ೪೨,೩೭೫ ಮಕ್ಕಳಿದ್ದು, ೪,೪೦೦ ನಗರ ಪ್ರದೇಶದಲ್ಲಿ ಮತ್ತು ೩೭,೯೭೫ ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಜೊತೆಗೆ ವಲಸಿಗ ಮಕ್ಕಳಿಗೂ ಸಹ ಪಲ್ಸ್ ಪೋಲಿಯೋ ಹನಿ ನೀಡಲಾಗುತ್ತದೆ ಎಂದರು.

ತಾ. ೨೭ ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದೆ. ಜೊತೆಗೆ ತಾ. ೨೮ ಮತ್ತು ಮಾ. ೧ ರಂದು ಗ್ರಾಮೀಣ ಪ್ರದೇಶದಲ್ಲಿ, ಹಾಗೆಯೇ ನಗರ ಪ್ರದೇಶದಲ್ಲಿ ತಾ. ೨೮, ಮಾರ್ಚ್ ೧ ಮತ್ತು ಮಾ. ೨ ರಂದು ಮನೆ ಮನೆಗೆ ತೆರಳಿ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತದೆ.

ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಸಂಬAಧಿಸಿದAತೆ ಜಿಲ್ಲೆಯಲ್ಲಿ ಒಟ್ಟು ೪೬೪ ಬೂತ್‌ಗಳನ್ನು ಸ್ಥಾಪಿಸಲಾಗಿದೆ. ೩೦ ಸಂಚಾರಿ ಬೂತ್‌ಗಳು, ೬ ಮೊಬೈಲ್ ತಂಡಗಳು, ೧೯೨೮ ಲಸಿಕೆ ನೀಡುವವರು, ೮೬ ಮೇಲ್ವಿಚಾರಕರು, ೯೨೪ ಮನೆಗೆ ಭೇಟಿ ನೀಡುವ ತಂಡವನ್ನು ನಿಯೋಜಿಸ ಲಾಗಿದೆ ಎಂದು ಗೋಪಿನಾಥ್ ಅವರು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ಅವರು ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ಒದಗಿಸಬೇಕಿದೆ ಎಂದರು.

ಸಾರ್ವಜನಿಕ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ನಗರಾಭಿವೃದ್ಧಿ, ಸಾರಿಗೆ, ಕಾರ್ಮಿಕ, ಪೊಲೀಸ್, ವೈದ್ಯಕೀಯ ಶಿಕ್ಷಣ, ಸೆಸ್ಕ್, ಕೆಎಸ್‌ಆರ್‌ಟಿಸಿ ಹೀಗೆ ನಾನಾ ಇಲಾಖೆ ಅಧಿಕಾರಿಗಳು ಸಹಕರಿಸುವಂತೆ ಡಿಎಚ್‌ಒ ಅವರು ಕೋರಿದರು.

ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಗ್ರಾ.ಪಂ. ಮಟ್ಟದಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

ರೋಟರಿ ಸಂಸ್ಥೆಯ ಅಚ್ಚಯ್ಯ ಅವರು ಪಲ್ಸ್ ಪೋಲಿಯೋ ಹನಿ ಕಾರ್ಯಕ್ರಮವನ್ನು ಪರಿಣಾಮಕಾರಿ ಯಾಗಿ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಹೋಂ ಸ್ಟೇ ಅಸೋಸಿಯೇಷನ್ ಅವರಿಗೆ ಮಾಹಿತಿ ನೀಡಿ ಪ್ರವಾಸಿಗ ೫ ವರ್ಷದೊಳಗಿನ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡುವಂತಾಗಲು ಕ್ರಮವಹಿಸಬೇಕಿದೆ ಎಂದು ಸಲಹೆ ಮಾಡಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಮಂಜುನಾಥ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಡಾ. ಆನಂದ್, ಡಾ. ಪುರುಷೋತ್ತಮ, ತಾಲೂಕು ವೈದ್ಯಾಧಿಕಾರಿಗಳಾದ ಡಾ. ಯತಿರಾಜು, ಡಾ. ಚೇತನ್, ಡಾ. ಶ್ರೀನಿವಾಸ್, ಪೌರಾಯುಕ್ತ ರಾಮದಾಸ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮುದ್ದಣ್ಣ, ಸೆಸ್ಕ್ ಇಇ ಅಶೋಕ್, ಪರಿಸರ ಅಧಿಕಾರಿ ಉಮಾಶಂಕರ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ವ್ಯವಸ್ಥಾಪಕ ಕೃಷ್ಣಪ್ಪ, ವಕ್ಫ್ ಬೋರ್ಡ್ ಸದಸ್ಯರು, ಲಯನ್ಸ್ ಸಂಸ್ಥೆಯ ಪ್ರತಿನಿಧಿಗಳು ಇದ್ದರು.