ಮಡಿಕೇರಿ, ಫೆ.೨೧: ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಭೆಯು ನಗರದ ಹೊರ ವಲಯದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು.
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ರಸ್ತೆ ಸುರಕ್ಷತೆಗೆ ಸಂಬAಧಿಸಿದAತೆ ಹೆಚ್ಚಿನ ಅರಿವು ಮೂಡಿಸುವುದರ ಜೊತೆಗೆ, ಅಗತ್ಯವಿರುವ ಕಡೆ ರಸ್ತೆ ಸುರಕ್ಷತಾ ಮಾಹಿತಿಯ ಫಲಕ ಅಳವಡಿಸುವಂತೆ ಸಲಹೆ ನೀಡಿದರು.
ರಸ್ತೆ ಸುರಕ್ಷತೆ ಸಂಬAಧ ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ಅಗತ್ಯ ಇರುವ ಕಡೆಗಳಲ್ಲಿ ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು. ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಮಾತನಾಡಿ ರಾಜಾಸೀಟು ಬಳಿ ವಾರಾಂತ್ಯದಲ್ಲಿ ಖಾಸಗಿ ಬಸ್ಗಳ ಸಂಚಾರಕ್ಕೆ ತುಂಬಾ ತೊಡಕಾಗುತ್ತದೆ. ಆದ್ದರಿಂದ ರಾಜಸೀಟು ಬಳಿ ಪಾರ್ಕಿಂಗ್ಗೆ ಅವಕಾಶ ಮಾಡಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಗೋಣಿಕೊಪ್ಪ-ಮೈಸೂರು ರಸ್ತೆಯ ಚೆನ್ನಂಗಿ ಹಳ್ಳ ಬಳಿ ಆಗಾಗ ಅಪಘಾತಗಳು ಸಂಭವಿಸುತ್ತಿದ್ದು, ಈ ಪ್ರದೇಶದಲ್ಲಿ ರಸ್ತೆ ಸುರಕ್ಷತೆ ಸಂಬAಧಿಸಿದAತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಸಾರ್ವಜನಿಕರೊಬ್ಬರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಎಲ್ಲೆಲ್ಲಿ ಅವಶ್ಯವಿದೆ ಅಂತಹ ಕಡೆಗಳಲ್ಲಿ ಸೂಚನಾ ಫಲಕ ಜೊತೆಗೆ, ಸಿಸಿಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಆಟೋ ಚಾಲಕರ ಸಂಘದ ಅಧ್ಯಕ್ಷ ಮೇದಪ್ಪ ಮಾತನಾಡಿ, ಮಡಿಕೇರಿ-ಮೈಸೂರು ರಸ್ತೆಯ ಚೈನ್ಗೇಟ್ ಬಳಿ ಬ್ಯಾರಿಕೇಡ್ ನಿರ್ಮಾಣ ಮಾಡಬೇಕಿದೆ. ನಿಧಾನಗತಿಯಲ್ಲಿ ಚಲಿಸಿ ಎಂಬ ಸೂಚನಾ ಫಲಕ ಅಳವಡಿಸುವಂತಾಗಬೇಕು ಎಂದು ಸಲಹೆ ನೀಡಿದರು. ನೆಲ್ಲಿಹುದಿಕೇರಿಯಲ್ಲಿ ಎರಡು ಬದಿಯೂ ವಾಹನ ನಿಲುಗಡೆ ಮಾಡುತ್ತಿದ್ದು, ಒಂದು ಕಡೆ ಮಾತ್ರ ವಾಹನ ನಿಲುಗಡೆಗೆ ಸ್ಥಳಾವಕಾಶ ಮಾಡಬೇಕು ಎಂದು ಕೋರಿದರು.
ಗೋಣಿಕೊಪ್ಪದ ಪೊನ್ನಂಪೇಟೆಗೆ ಹೋಗುವ ಮಾರ್ಗದ ಜಂಕ್ಷನ್ನಲ್ಲಿ ವಾಹನ ನಿಲುಗಡೆಯಿಂದ ತುಂಬಾ ಕಿರಿಕಿರಿ ಉಂಟಾಗುತ್ತದೆ. ಆದ್ದರಿಂದ ೬೦ ಮೀಟರ್ ದೂರದಲ್ಲಿ ವಾಹನಗಳನ್ನು ನಿಲುಗಡೆ ಮಾಡುವುದು ಒಳ್ಳೆಯದು ಎಂದು ಸಾರ್ವಜನಿಕರೊಬ್ಬರು ಗಮನ ಸೆಳೆದರು. ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಇನ್ಸ್ಪೆಕ್ಟರ್ ರಾಮಚಂದ್ರ, ರೀಟಾ ಇತರರು ಇದ್ದರು.
ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಮೇಶ್ ಜೋಯಪ್ಪ ಇತರರು ಇದ್ದರು.
ಜಿಲ್ಲೆಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚರಿಸಲು ಅವಕಾಶ ನೀಡಬೇಕು ಎಂದು ಅರ್ಜಿ ಸಲ್ಲಿಕೆಯಾಗಿದ್ದು, ಈ ಸಂಬAಧ ಕೆಎಸ್ಆರ್ಟಿಸಿ ಪರವಾಗಿ ನ್ಯಾಯವಾದಿ ವೆಂಕಟರಮಣಪ್ಪ, ಹಾಗೂ ಖಾಸಗಿ ಬಸ್ ಮಾಲೀಕರ ಪರವಾಗಿ ನ್ಯಾಯವಾದಿ ನಾಗೇಶ್ ಅವರು ಬಸ್ ಸಂಚಾರ ಸಂಬAಧ ವಿಷಯ ಮಂಡಿಸಿದರು.
ಈ ಬಗ್ಗೆ ಎರಡು ಕಡೆಯಿಂದ ವಾದ ಆಲಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ‘ಗ್ರಾಮ ವಾಸ್ತವ್ಯ’ ಸಂದರ್ಭದಲ್ಲಿ ಅಗತ್ಯ ಬಸ್ ಸೇವೆ ಕಲ್ಪಿಸುವಂತೆ ಸಾರ್ವಜನಿಕರು ಮನವಿ ಮಾಡುತ್ತಾರೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಆದ್ಯತೆ ಮೇಲೆ ಕರ್ತವ್ಯ ನಿರ್ವಹಿಸುವುದು ಅಗತ್ಯವಾಗಿದೆ ಎಂದರು.
ಸದ್ಯ ಜಿಲ್ಲೆಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರ ಸಂಬAಧ ಮುಂದಿನ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಆರ್ಟಿಒ ಕಚೇರಿ ಇನ್ಸ್ಪೆಕ್ಟರ್ ರಾಮಚಂದ್ರ, ರೀಟಾ ಇತರರು ಇದ್ದರು.