ಕುಶಾಲನಗರ, ಫೆ.೨೧: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ವ್ಯಾಪಾರಿಗಳಿಂದ ಗುರುತಿನ ಚೀಟಿ ಪಡೆಯಲು ಕೆಲವರು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪಟ್ಟಣದ ಬೀದಿಬದಿ ಸಣ್ಣ ವ್ಯಾಪಾರಿಗಳು ದೂರು ಸಲ್ಲಿಸಿದರು.

ಹಲವು ವರ್ಷಗಳಿಂದ ಕುಶಾಲನಗರ ಪಟ್ಟಣದಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವ ಸಣ್ಣ ವ್ಯಾಪಾರಿಗಳಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಕೆಲವರು ವ್ಯಾಪಾರಿಗಳಿಗೆ ಮತ್ತು ಇತರರಿಗೆ ಪಟ್ಟಣ ಪಂಚಾಯಿತಿ ಗುರುತಿನ ಚೀಟಿಗಳನ್ನು ನೀಡುವ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಸಂಘದ ಜಿಲ್ಲಾಧ್ಯಕ್ಷ ಕೆ.ಬಿ. ರಾಜು ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿಗೆ ತೆರಳಿ ದೂರು ಸಲ್ಲಿಸಲಾಯಿತು.