ಚೆಯ್ಯಂಡಾಣೆ, ಫೆ. ೨೧: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ ಪಟ್ಟಣ, ಕೊಕೇರಿ,ಚೇಲವಾರ,ನರಿಯಂದಡ ಗ್ರಾಮಗಳ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೂಡ ಸಮಸ್ಯೆ ಮಾತ್ರ ಬಗೆ ಹರಿದಿಲ್ಲ.

ಶಾಲಾ ಕಾಲೇಜು ವಿದ್ಯಾರ್ಥಿಗಳ ಪರೀಕ್ಷೆ ಸಮೀಪಿಸುತ್ತಿದೆ. ವಿದ್ಯುತ್ ಸಮಸ್ಯೆಯಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಈ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಆಚಯ್ಯ ಪ್ರತಿಕ್ರಿಯಿಸಿ ಚೆಯ್ಯಂಡಾಣೆ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು ಹಲವಾರು ಬಾರಿ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ವರ್ಷದ ಹಿಂದಷ್ಟೇ ಇಲ್ಲಿ ಖಾಯಂ ಲೈನ್ ಮ್ಯಾನ್ ನಿಯೋಜಿಸಲು ಮನವಿ ಮಾಡಲಾಗಿತ್ತು. ಅದಕ್ಕೂ ಯಾವುದೇ ಸ್ಪಂದನ ದೊರೆತಿಲ್ಲ ಕೂಡಲೇ ಮೆಸ್ಕಾಂ ಅಧಿಕಾರಿಗಳು ಎಚ್ಚೆತ್ತು ನಿರಂತರ ವಿದ್ಯುತ್ ಸಮಸ್ಯೆ ಆಗುತ್ತಿರುವುದಕ್ಕೆ ಪರಿಹಾರ ಒದಗಿಸಬೇಕು. ಚೆಯ್ಯಂಡಾಣೆ ವ್ಯಾಪ್ತಿಗೆ ಖಾಯಂ ಲೈನ್ ಮ್ಯಾನ್ ಅನ್ನು ನಿಯೋಜಿಸಿ ಈ ವ್ಯಾಪ್ತಿಯ ಗ್ರಾಮಸ್ಥರ ತೊಂದರೆಯನ್ನು ನೀಗಿಸಬೇಕಾಗಿದೆ ಎಂದು ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.

ಇದಕ್ಕೂ ಸ್ಪಂದಿಸದಿದ್ದರೆ ಗ್ರಾಮಸ್ಥರು ಸಂಘ-ಸAಸ್ಥೆಗಳು, ಗ್ರಾಮ ಪಂಚಾಯಿತಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿ ಸಹಯೋಗ ದೊಂದಿಗೆ ಹೋರಾಟ ನಡೆಸಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸ ಲಾಗುವುದು ಎಂದು ಎಚ್ಚರಿಸಿದ್ದಾರೆ.

- ವರದಿ : ಅಶ್ರಫ್ ಚೆಯ್ಯಂಡಾಣೆ