ಮಡಿಕೇರಿ, ಫೆ. ೨೦: ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಸಾಂಕೇತಿಕವಾಗಿ ಕನ್ನಡ ಮತ್ತು ಸಂಸÀ್ಕೃತಿ ಇಲಾಖೆ ಕಚೇರಿಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಜ್ಯೋತಿ ಬೆಳಗುವುದರ ಮೂಲಕ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು ಹಾಗೂ ಕನ್ನಡ ಮತ್ತು ಸಂಸÀ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಟಿ.ದರ್ಶನ್, ಮಂಜುನಾಥ್, ಸುಭಾಷ್, ಪೂರ್ಣಿಮ ಹಾಜರಿದ್ದರು.