ಮಡಿಕೇರಿ, ಫೆ.೨೧ : ಕೊಡಗು ಜಿಲ್ಲಾ ಮೊಗೇರ ಸಮಾಜದ ಮಹಾಸಭೆ ಮಾ.೧ ರಂದು ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಬೆಳಗ್ಗೆ ೧೦.೩೦ ಗಂಟೆಗೆ ನಡೆಯಲಿರುವ ಸಭೆಯಲ್ಲಿ ಸಂಘಟನೆಯ ಬಲವರ್ಧನೆ ಕುರಿತು ಚರ್ಚಿಸಲಾಗುವುದು. ಅಲ್ಲದೆ ಪ.ಪಂ ಮತ್ತು ಗ್ರಾ.ಪಂ ಗಳಿಗೆ ನೂತನವಾಗಿ ಆಯ್ಕೆಯಾದ ಸಮಾಜದ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.