ಮಡಿಕೇರಿ, ಫೆ. ೨೧: ಸಚಿವ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಕಾಂಗ್ರೆಸ್‌ನಿAದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಈಶ್ವರಪ್ಪ ಅವರನ್ನು ಬಂಧಿಸಿ, ಸಚಿವ ಸಂಪುಟದಿAದ ವಜಾಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ರಾಷ್ಟçಧ್ವಜ ತೆಗೆದು ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂಬ ಈಶ್ವರಪ್ಪ ಅವರ ಹೇಳಿಕೆ ದುಃಖಕರ. ರಾಷ್ಟçಧ್ವಜದ ಕುರಿತು ಇಂತಹ ಹೇಳಿಕೆ ನೀಡಿರುವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕೆಪಿಸಿಸಿ ಪ್ರಮುಖ ಟಿ.ಪಿ ರಮೇಶ್ ಮಾತನಾಡಿ, ಭಾರತ ರಾಷ್ಟç ಧ್ವಜಕ್ಕೆ ಅಗೌರವ ಬರುವ ರೀತಿ ಈಶ್ವರಪ್ಪ ಮಾತನಾಡಿದ್ದಾರೆ. ಇದು ರಾಷ್ಟç, ಸಂವಿಧಾನ ವಿರೋಧಿ ನಡೆಯಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಹೇಳಿದರು.
ಈ ವೇಳೆ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭಾ ಮಾಜಿ ಸದಸ್ಯ ಚುಮ್ಮಿ ದೇವಯ್ಯ, ಪಂಚಾಯತ್ ರಾಜ್ ಜಿಲ್ಲಾ ಘಟಕದ ಅಧ್ಯಕ್ಷ ತೆನ್ನಿರಾ ಮೈನಾ, ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ಕೆ.ಜಿ. ಪೀಟರ್, ನೆರವಂಡ ಉಮೇಶ್ ಮತ್ತಿತರರು ಇದ್ದರು.
ವೀರಾಜಪೇಟೆ: ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದಲೂ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಯಿತು. ನಗರದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿ ಮೆರವಣಿಗೆ ಮೂಲಕ ತೆರಳಿ ಉಪ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಮಾತನಾಡಿ, ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂಬ ಹೇಳಿಕೆ ತ್ರಿವರ್ಣ ಧ್ವಜಕ್ಕೆ ಮಾಡಿರುವ ಅಪಮಾನವಾಗಿದೆ ಎಂದರು. ಸರ್ಕಾರವು ಸಚಿವ ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಎಂದು ಒತ್ತಾಯಿಸಿದರು.
ರಾಜ್ಯ ಕಿಸಾನ್ ಘಟಕದ ಪ್ರಧಾನ ಕಾರ್ಯದÀರ್ಶಿ ಕೆ.ಎಸ್. ಗೋಪಾಲ ಕೃಷ್ಣ ಮಾತನಾಡಿ, ಈಶ್ವರಪ್ಪ ಅವರು ನೀಡಿರುವ ಹೇಳಿಕೆಯು ದೇಶದ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಹೇಳಿಕೆಯಾಗಿದೆ ಎಂದರು.
ಜಿಲ್ಲಾ ಎಸ್.ಟಿ. ಘಟಕದ ಅಧ್ಯಕ್ಷ ವಿ.ಕೆ. ಸತೀಶ್ ಮಾತನಾಡಿ, ಸಚಿವ ಈಶ್ವರಪ್ಪ ಅವರ ಮನಸ್ಥಿತಿ ಹದಗೆಟ್ಟಿರು ವಂತಿದೆ. ಅವರನ್ನು ಮನೋರೋಗ ತಜ್ಞರ ಬಳಿ ತಪಾಸಣೆಗೆ ಸೇರಿಸಬೇಕು ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಡಿ.ಸಿ.ಸಿ. ಸದಸ್ಯರಾದ ಎಂ.ಕೆ. ಪೂವಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಮೋಹಮ್ಮದ್ ರಾಫಿ, ಅಗಸ್ಟಿನ್ ಬೆೆನ್ನಿ, ಉಮ್ಮರ್ ಫಾರೋಖ್, ಗ್ರಾಮ ಪಂಚಾಯಿತಿ ಸದಸ್ಯರಾದ ಆಶ್ವಾಖ್, ಸಾದೀಕ್, ನೌಷದ್, ಮಾಲ್ದಾರೆ ವಲಯ ಅಧ್ಯಕ್ಷ ಸಾಜಿ ಥೋಮಸ್, ಹೊಸೂರು ವಲಯ ಅಧ್ಯಕ್ಷ, ರತ್ನ ಸುಬ್ಬಯ್ಯ, ಪಾಲಿಬೆಟ್ಟ ವಲಯ ಅಧ್ಯಕ್ಷ ಸಾಬು ಕಾಳಯ್ಯ, ನಗರ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ರೂಮಾನ್ ಮತ್ತು ಪಕ್ಷದ ಪ್ರಮುಖರು ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.