ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ - ಮೂವರ ಬಂಧನ
ಶಿವಮೊಗ್ಗ, ಫೆ. ೨೧: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಭಾನುವಾರ ನಡೆದ ಹತ್ಯೆ ಪ್ರಕರಣದಲ್ಲಿ ಸಾವನ್ನಪ್ಪಿದ ಭಜರಂಗದಳ ಕಾರ್ಯಕರ್ತ ಹರ್ಷ ಅವರನ್ನು ಕಾರಿನಲ್ಲಿ ಬಂದಿದ್ದ ೬ ಜನರು ಬರ್ಬರ ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಶಿವಮೊಗ್ಗದಲ್ಲಿ ವ್ಯಾಪಕ ಹಿಂಸಾಚಾರ ಉಲ್ಬಣಗೊಂಡಿದೆ. ಶಿವಮೊಗ್ಗದಲ್ಲಿ ಕಾನೂನು-ಸುವ್ಯವಸ್ಥೆ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಶಿವಮೊಗ್ಗ ನಗರದಲ್ಲಿ ಹರ್ಷ ಮೃತದೇಹ ಮೆರವಣಿಗೆ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ ನಡೆಸಲಾಗಿದೆ. ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗ ಬಿ.ಹೆಚ್. ರಸ್ತೆಯಲ್ಲಿ ಹಣ್ಣಿನ ಅಂಗಡಿ ಮೇಲೆ ಕಲ್ಲೆಸೆತ ನಡೆಸಲಾಗಿದೆ. ಶೋ ರೂಮ್, ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದರು. ಅಂತೆಯೇ ಶಿವಮೊಗ್ಗ ಭದ್ರತೆಗೆ ಬೆಂಗಳೂರಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ೨೧೨ ಪೊಲೀಸರನ್ನ ರಾಜ್ಯ ಸರ್ಕಾರ ಭದ್ರತೆಗೆ ನಿಯೋಜಿಸಿದೆ. ನಾಲ್ವರು ಪಿಐ, ೮ ಪಿಎಸ್‌ಐ, ೨೦೦ ಹೆಚ್‌ಸಿ, ಪಿಸಿ ನಿಯೋಜನೆ ಮಾಡಲಾಗಿದೆ. ಎಡಿಜಿಪಿ ಎಸ್.ಮುರುಗನ್ ಶಿವಮೊಗ್ಗಕ್ಕೆ ಕಳುಹಿಸಲಾಗಿತ್ತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಶ್ರಮಿಸುತ್ತಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ಹಂತದಲ್ಲಿರುವುದರಿAದ ಮಾಹಿತಿ ನೀಡಲಾಗಲ್ಲ. ಬೆಳಗ್ಗೆ ಹರ್ಷನ ತಂದೆ, ತಾಯಿಯನ್ನು ಭೇಟಿಯಾಗಿದ್ದೆವು. ನನ್ನ ಮಗನನ್ನು ತಂದುಕೊಡಲಾಗಲ್ಲ, ಸೂಕ್ತ ಕ್ರಮಕೈಗೊಳ್ಳಿ. ಬೇರೆ ಮಕ್ಕಳಿಗೆ ಇಂತಹ ಸ್ಥಿತಿ ಬರಬಾರದು ಎಂದು ಸಚಿವರಲ್ಲಿ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ೧,೨೦೦ ಪೊಲೀಸ್ ಸಿಬ್ಬಂದಿ ಇದ್ದು, ಬೆಂಗಳೂರಿನಿAದಲೂ ೨೦೦ ಸಿಬ್ಬಂದಿ ಕಳುಹಿಸಲಾಗಿದೆ. ಹರ್ಷ ಹತ್ಯೆಯಲ್ಲಿ ಐವರು ಭಾಗಿಯಾಗಿರುವ ಮಾಹಿತಿಯಿದೆ. ಮತ್ತೆ ಎಷ್ಟು ಜನ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಅಂತೆಯೇ ಸಂಘಟನೆಗಳ ನಿಷೇಧಿಸುವ ಕೂಗಿನ ಕುರಿತು ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ಸಂಘಟನೆ ನಿಷೇಧಿಸುವ ಬಗ್ಗೆ ನಿರ್ಧರಿಸಿಲ್ಲ. ಅದಕ್ಕೆ ಕಾನೂನು ಪ್ರಕ್ರಿಯೆಗಳಿವೆ, ಮುಂದೆ ನೋಡೋಣ. ಸಮಯಾವಕಾಶ ನೋಡಿಕೊಂಡು ಸಂಘಟನೆ ನಿಷೇಧಿಸುತ್ತೇವೆ. ಯಾವುದನ್ನೂ ಬಾಯಿಬಿಟ್ಟು ಹೇಳುವಂತಹ ಸ್ಥಿತಿಯಲ್ಲಿಲ್ಲ ಎಂದು ಹೇಳಿದರು.
ಹಿಜಾಬ್ ಕಡ್ಡಾಯ ಧಾರ್ಮಿಕ ಆಚರಣೆಗಳ ಭಾಗವಲ್ಲ
ಬೆಂಗಳೂರು, ಫೆ. ೨೧: ಕರ್ನಾಟಕ ಸರ್ಕಾರ ಹಿಜಾಬ್ ವಿಷಯದಲ್ಲಿ ತನ್ನ ನಿಲುವನ್ನು ಹೈಕೋಟ್‌ಗೆ ಸ್ಪಷ್ಟಪಡಿಸಿದ್ದು, ಹಿಜಾಬ್ ಕಡ್ಡಾಯ ಧಾರ್ಮಿಕ ಆಚರಣೆಗಳ ಭಾಗವಲ್ಲ ಎಂದು ಹೇಳಿದೆ. ಡಾ.ಬಿ. ಆರ್ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ವಾದ ಮಂಡಿಸಿರುವ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಪ್ರಭುಲಿಂಗ ನಾವಡಗಿ, ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿAದ ಧಾರ್ಮಿಕ ಬೋಧನೆಗಳನ್ನು ಹೊರಗಿಡಬೇಕು ಎಂದು ಹೇಳಿದ್ದಾರೆ. ಮುಖ್ಯ ನ್ಯಾ.ರಿತುರಾಜ್ ಅವಸ್ಥಿ, ನ್ಯಾ. ಜೆಎಂ ಖಾಜಿ ಹಾಗೂ ನ್ಯಾ. ಕೃಷ್ಣ ಎಂ ದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸುತ್ತಿತ್ತು. ಅಡ್ವೊಕೇಟ್ ಜನರಲ್ ಪ್ರಕಾರ ಕಡ್ಡಾಯ ಧಾರ್ಮಿಕ ಆಚರಣೆಗಳು ಮಾತ್ರ ಆರ್ಟಿಕಲ್ ೨೫ ರ ಅಡಿಯಲ್ಲಿ ರಕ್ಷಣೆ ಪಡೆಯುತ್ತವೆ ಹಾಗೂ ಪ್ರಜೆಗಳಿಗೆ ತಾವು ನಂಬಿದ ಮತವನ್ನು ಆಚರಣೆ ಮಾಡಲು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ. ಪ್ರಭುಲಿಂಗ ನಾವಡಗಿ ವಾದ ಮಂಡನೆ ವೇಳೆ, ಸಿಜೆ ವಕೀಲರನ್ನು ಪ್ರಶ್ನಿಸಿದ್ದು, ಸರ್ಕಾರದ ಆದೇಶ ನಿರುಪದ್ರವಿಯಾಗಿದೆ ಹಾಗೂ ರಾಜ್ಯ ಸರ್ಕಾರ ಹಿಜಾಬ್ ನಿಷೇಧವನ್ನಾಗಲೀ ಅಥವಾ ಹಿಜಾಬ್‌ಗೆ ನಿರ್ಬಂಧವನ್ನಾಗಲಿ ವಿದಿಸಿಲ್ಲ ಎಂದು ಹೇಳುತ್ತೀರಿ. ಆದರೆ ಸರ್ಕಾರಿ ಆದೇಶದಲ್ಲಿ ವಿದ್ಯಾರ್ಥಿಗಳು ನಿಗದಿತ ಸಮವಸ್ತçವನ್ನೇ ಧರಿಸಬೇಕೆಂದು ಹೇಳುತ್ತದೆ. ನಿಮ್ಮ ನಿಲುವೇನು? ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅನುಮತಿ ನೀಡಬಹುದೇ? ಬೇಡವೇ? ಎಂಬುದನ್ನು ತಿಳಿಸಿ ಎಂದು ಹೇಳಿದ್ದಾರೆ.