ಮಡಿಕೇರಿ, ಫೆ. ೨೨: ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ. ನಂಜುAಡೇಗೌಡ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜು ಮೊಗವೀರ ಅವರು ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.